ಚನ್ನರಾಯಪಟ್ಟಣ: ಮತಕಳವು ವಿರೋಧಿಸಿ ಕಾಂಗ್ರೆಸ್ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಗುರುವಾರ ರಾತ್ರಿ ಪಟ್ಟಣದಲ್ಲಿ ಮೇಣದ ಬತ್ತಿ ಹಿಡಿದು ಮೆರವಣಿಗೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಂತರ ಕೆ.ಆರ್. ವೃತ್ತದ ಬಳಿ ಕಾಂಗ್ರೆಸ್ ಮುಖಂಡ ಎಂ.ಎ. ಗೋಪಾಲಸ್ವಾಮಿ ಮಾತನಾಡಿ, ‘ಬೆಂಗಳೂರಿನ ಮಹದೇವಪುರದಲ್ಲಿ ಮತಕಳ್ಳತನ ನಡೆದಿದೆ. ಸಾವಿರಾರು ಮತಗಳಲ್ಲಿ ವ್ಯತ್ಯಾಸ ಕಂಡುಬಂದಿದೆ. ದೇಶದ ಪ್ರಜಾತಂತ್ರ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವುದನ್ನು ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಮತಕಳ್ಳತನ ವಿರೋಧಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟ ಮುಂದುವರೆಯಲಿದೆ’ ಎಂದರು.
ಕಾಂಗ್ರೆಸ್ ಮುಖಂಡ ಸಿ.ಎಸ್. ಪುಟ್ಟೇಗೌಡ ಮಾತನಾಡಿ, ‘ಮತಕಳ್ಳತನದ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ಮಂಜೇಗೌಡ ಮಾತನಾಡಿದರು. ಗ್ಯಾರಂಟಿ ಅನುಷ್ಠಾನ ಯೋಜನಾ ಸಮಿತಿಯ ತಾಲ್ಲೂಕು ಘಟಕದ ಅಧ್ಯಕ್ಷ ಎಲ್.ಪಿ. ಪ್ರಕಾಶ್‍ಗೌಡ, ಪುರಸಭಾ ಸದಸ್ಯರಾದ ಸಿ.ಎಸ್. ಪ್ರಕಾಶ್, ರವಿ, ಪ್ರೇಮ್‍ಕುಮಾರ್, ನಗರಯೋಜನಾ ಪ್ರಾಧಿಕಾರದ ಅಧ್ಯಕ್ಷ ಜಿ.ಆರ್.ಮೂರ್ತಿ, ಕೆಡಿಪಿ ನಾಮನಿರ್ದೇಶನ ಸದಸ್ಯ ಮಹೇಶ್‍ಕಬ್ಬಾಳು, ಮುಖಂಡರಾದ ಎ.ಸಿ. ಆನಂದಕುಮಾರ್, ಸಿ.ಎಸ್. ಯುವರಾಜ್, ಶಂಕರಲಿಂಗೇಗೌಡ, ಅಬ್ದುಲ್ ಹಾದಿ, ನಿಂಗೇಗೌಡ,ಸುರೇಶ್, ಜಗದೀಶ್ ಸೇರಿ ಮುಖಂಡರು ಹಾಗು ಕಾರ್ಯಕರ್ತರು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.