ಎ.ಎಸ್. ಪೊನ್ನಣ್ಣ, ಶಾಸಕ.
ಸಕಲೇಶಪುರ: ಶಾಸಕ ಪೊನ್ನಣ್ಣ ಅವರ ಆಪ್ತ ಸಹಾಯಕ ಮಹೇಂದ್ರ ಅವರ ಪತ್ನಿ ಶ್ರುತಿ (35), ಪಟ್ಟಣದ ಪಿಡಬ್ಲ್ಯುಡಿ ವಸತಿ ಗೃಹದಲ್ಲಿ ಶನಿವಾರ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲ್ಲೂಕಿನ ಕಲ್ಗಣೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಶ್ರುತಿ ಕೆಲ ತಿಂಗಳುಗಳಿಂದ ಮಾನಸಿಕ ಖಿನ್ನತೆ ಒಳಗಾಗಿದ್ದರು. ಶನಿವಾರ ಮನೆಯಲ್ಲಿಯೇ ವಿಷ ಕುಡಿದಿದ್ದು, ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಕಲೇಶಪುರ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.