ADVERTISEMENT

‘ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯ ಪ್ರಶಂಸನೀಯ’

ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷರ ಸಮಾವೇಶದ ಸಮಾರೋಪ

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 4:28 IST
Last Updated 28 ಅಕ್ಟೋಬರ್ 2025, 4:28 IST
ಶ್ರವಣಬೆಳಗೊಳದಲ್ಲಿ ಜರುಗಿದ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಘಟಕದ ಅಧ್ಯಕ್ಷರನ್ನು ಎಂ.ಎ.ಗೋಪಾಲಸ್ವಾಮಿ ಸನ್ಮಾನಿಸಿದರು. ಸಿ.ಎನ್.ಅಶೋಕ್ ಪಾಲ್ಗೊಂಡಿದ್ದರು
ಶ್ರವಣಬೆಳಗೊಳದಲ್ಲಿ ಜರುಗಿದ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಘಟಕದ ಅಧ್ಯಕ್ಷರನ್ನು ಎಂ.ಎ.ಗೋಪಾಲಸ್ವಾಮಿ ಸನ್ಮಾನಿಸಿದರು. ಸಿ.ಎನ್.ಅಶೋಕ್ ಪಾಲ್ಗೊಂಡಿದ್ದರು   

ಶ್ರವಣಬೆಳಗೊಳ: ‘ಪ್ರಾಥಮಿಕ ಮತ್ತು ಪ್ರೌಢ ಶಾಲಾ ಹಂತದ ಮಕ್ಕಳಲ್ಲಿ ಕನ್ನಡ ಸಾಹಿತ್ಯವನ್ನು ಓದುವ ರಚಿಸುವ ಹವ್ಯಾಸವನ್ನು ಮೈಗೂಡಿಸಿಕೊಳ್ಳಲು ಪ್ರೇರೇಪಿಸುತ್ತಿರುವ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯ ಅತ್ಯಂತ ಪ್ರಶಂಸನೀಯ’ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಹೇಳಿದರು.

ಕ್ಷೇತ್ರದ ಹೊರ ವಲಯದಲ್ಲಿರುವ ಅತಿ ಮುಖ್ಯ ಗಣ್ಯರ ಅತಿಥಿ ಗೃಹದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಆಯೋಜಿಸಿದ್ದ ರಾಜ್ಯ ಮಟ್ಟದ ಜಿಲ್ಲಾ ಘಟಕದ ಅಧ್ಯಕ್ಷರ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಭಾನುವಾರ ಭಾಗವಹಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ರಾಜ್ಯಾಧ್ಯಕ್ಷ ಸಿ.ಎನ್.ಅಶೋಕ್ ಮಾತನಾಡಿ, ‘ಮಕ್ಕಳಲ್ಲಿ ಗ್ರಂಥಾಲಯದ ಬಳಕೆಯನ್ನು ಮಾಡುವಂತೆ ಶಿಕ್ಷಕರು ಮುತುವರ್ಜಿ ವಹಿಸಿದರೆ ಆ ಮಕ್ಕಳಲ್ಲಿ ಹೆಚ್ಚಿನ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ’ ಎಂದರು. ಮಕ್ಕಳಲ್ಲಿ ವಿಶೇಷವಾಗಿ ಪರಿಸರ ಸಂರಕ್ಷಣೆ ಪ್ರಾಣಿ ಸಂಕುಲಗಳ ಬಗ್ಗೆ ಕಾಳಜಿ ವಹಿಸುವಂತೆ ಹೆಚ್ಚಿನ ಆಧ್ಯತೆ ನೀಡಲಾಗುತ್ತದೆ ಎಂದರು.

ADVERTISEMENT

ಜಿಲ್ಲಾ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಗೌರವಿಸಲಾಯಿತು.

ಮಕ್ಕಳ ಸಾಹಿತ್ಯ ಪರಿಷತ್ತಿನ ಕಾರ್ಯಾಧ್ಯಕ ಮಹಾದೇವ್, ಉಪಾಧ್ಯಕ್ಷ ಜಗದೀಶ್, ಹಾಸನ ಜಿಲ್ಲಾ ಘಟಕದ ಅಧ್ಯಕ್ಷ ಗಂಗಾಧರ್, ತಾಲ್ಲೂಕು ಅಧ್ಯಕ್ಷ ಎ.ಎಲ್.ನಾಗೇಶ್, ಪ್ರಧಾನ ಕಾರ್ಯದರ್ಶಿ ಎಚ್.ವಿ.ಸಿದ್ದೇಶ್, ಸಂಘಟನಾ ಕಾರ್ಯದರ್ಶಿ ಎಸ್.ಎ.ಸಚಿನ್ ಜೈನ್, ಸಹಕಾರ್ಯದರ್ಶಿ ಸಿ.ಎಸ್.ಮನೋಹರ್, ಸಂಚಾಲಕ ಎ.ಎಂ.ಜಯರಾಮ್, ಖಜಾಂಚಿ ಲತಾ ಪುಟ್ಟೇಗೌಡ, ನಿರ್ದೇಶರಾದ ಅರ್ಪಿತಾ, ಸಿ.ವೈ.ಸತ್ಯನಾರಾಯಣ, ಅಭಿಗೌಡ, ಇತರರು ಇದ್ದರು.

ಶ್ರವಣಬೆಳಗೊಳದಲ್ಲಿ ಜರುಗಿದ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಸಮಾರೋಪ ಸಮಾರಂಭದಲ್ಲಿ ಜಿಲ್ಲಾಧ್ಯಕ್ಷರುಗಳನ್ನು ಎಂ.ಎ.ಗೋಪಾಲಸ್ವಾಮಿ ಸನ್ಮಾನ ಮಾಡಿದ ಸಂದರ್ಭದಲ್ಲಿ ಸಿ.ಎನ್.ಅಶೋಕ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.