ADVERTISEMENT

ಹಾಸನ ಜಿಲ್ಲೆಯಲ್ಲಿರುವುದು ಎರಡೇ ಪಕ್ಷ: ಡಾ.ಸೂರಜ್

ಪಕ್ಷ ವಿರೋಧಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಡಾ.ಸೂರಜ್‌

​ಪ್ರಜಾವಾಣಿ ವಾರ್ತೆ
Published 13 ಜನವರಿ 2025, 0:27 IST
Last Updated 13 ಜನವರಿ 2025, 0:27 IST
ಹೊಳೆನರಸೀಪುರ ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದ ಸಾರ್ವಜನಿಕ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಮಾತನಾಡಿದರು
ಹೊಳೆನರಸೀಪುರ ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದ ಸಾರ್ವಜನಿಕ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಮಾತನಾಡಿದರು   

ಹಾಸನ: ‘ಹಾಸನ ಜಿಲ್ಲೆಯಲ್ಲಿ ಯಾವುದೇ ಪಕ್ಷ ಇಲ್ಲ. ಇರುವುದು ಎರಡೇ ಪಕ್ಷ. ಒಂದು ಎಚ್​.ಡಿ. ದೇವೇಗೌಡರ ಪರ, ಇನ್ನೊಂದು ದೇವೇಗೌಡರ ವಿರುದ್ಧ ಪಕ್ಷ. ನಮ್ಮ ತಾತ ಹೇಳಿರುವ ಮಾತು ನನಗೆ ಈಗ ಅನುಭವಕ್ಕೆ ಬರುತ್ತಿದೆ’  ಎಂದು ವಿಧಾನಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ ಹೇಳಿದರು.

ಹೊಳೆನರಸೀಪುರ ತಾಲ್ಲೂಕಿನ ಅಗ್ರಹಾರ ಗ್ರಾಮದಲ್ಲಿ ಶನಿವಾರ ರಾತ್ರಿ ತಮ್ಮ ಜನ್ಮದಿನದ ಸಂಭ್ರಮಾಚರಣೆಯಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿಗಳನ್ನು ಅವಾಚ್ಯವಾಗಿ ನಿಂದಿಸಿದರು.

‘ಪೆನ್​ಡ್ರೈವ್​ ಹಂಚಿ ನಾನು ಎಂಎಲ್​ಸಿ ಆಗಿಲ್ಲ. ಪಕ್ಷದ ಕಾರ್ಯಕರ್ತರಿಗೆ ಯಾವುದೇ ಇಲಾಖೆಯಲ್ಲಿ ತೊಂದರೆಯಾದರೆ ನನ್ನ ಗಮನಕ್ಕೆ ತನ್ನಿ. ಯಾರು ಬರುತ್ತಾರೋ, ಬಿಡುತ್ತಾರೋ, ನಾನು ಮಾತ್ರ ಬರುತ್ತೇನೆ’ ಎಂದು ಹೇಳಿದರು.

ADVERTISEMENT

‘ಯಾವುದೇ ಜಾತಿ ಹಾಗೂ ಜನಾಂಗ ನೋಡದೇ ಕೆಲಸ ಮಾಡುತ್ತೇನೆ. ನಮ್ಮ ತಾತ ದೇವೇಗೌಡರು ಯಾವುದೇ ಜಾತಿ ನೋಡಬೇಡ ಎಂದಿದ್ದಾರೆ. ಒಮ್ಮೆ ಒಂದು ಸಮುದಾಯ ಕೈಬಿಡಬಹುದು. ಆದರೆ, ಅವರಿಗೆ ಅರ್ಥವಾದ ಬಳಿಕ ನಿನ್ನ ಕೈಹಿಡಿಯುತ್ತಾರೆ ಎಂದು ಹೇಳಿದ್ದಾರೆ’ ಎಂದರು.

‘ಹೋದ ಲೋಕಸಭಾ ಚುನಾವಣೆಯಲ್ಲಿ ಜಾತಿಯ ವಿಷ ಬೀಜ ಬಿತ್ತಿದ್ದರು. ಎಚ್​.ಡಿ.ರೇವಣ್ಣನವರು ಎಷ್ಟು ದೇವಸ್ಥಾನ ಕಟ್ಟಿದ್ದಾರೆ ಎಂಬುದು ಇಲ್ಲಿನ ಸಂಸದರಿಗೆ ಗೊತ್ತಾ? ಎಂದು ಕೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.