ADVERTISEMENT

ಕಾಂಗ್ರೆಸ್‌ನಲ್ಲಿ ಹೊಂದಾಣಿಕೆ ರಾಜಕಾರಣವಿಲ್ಲ: ಸಂಸದ ಡಿ.ಕೆ.ಸುರೇಶ್‌

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 12:43 IST
Last Updated 9 ಜುಲೈ 2021, 12:43 IST
ಡಿ.ಕೆ.ಸುರೇಶ್
ಡಿ.ಕೆ.ಸುರೇಶ್   

ಹಾಸನ: ಹೋರಾಟದ ಪಕ್ಷವಾದ ಕಾಂಗ್ರೆಸ್‌ನಲ್ಲಿ ಹೊಂದಾಣಿಕೆ ರಾಜಕಾರಣವಿಲ್ಲ. ಅಧಿಕಾರ ಇರಲಿ, ಇಲ್ಲದಿರಲಿ ಯಾರಿಗೂ ಶರಣಾಗುವುದಿಲ್ಲಎಂದು ಸಂಸದ ಡಿ.ಕೆ.ಸುರೇಶ್‌ ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರು ಯಾರ ಮನಗೆ ಹೋಗುತ್ತಾರೆ ಎಂಬುದು ಗೊತ್ತಿಲ್ಲ. ಆದರೆ, ಎಚ್.ಡಿ.ರೇವಣ್ಣ ಅವರು ಎಲ್ಲರ ಜೊತೆಯೂ ಚೆನ್ನಾಗಿದ್ದಾರೆ. ಎಲ್ಲರ ಮನೆಗೂಹೋಗುತ್ತಾರೆ ಎಂದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಮತ್ತು ತುಮಕೂರು ಕ್ಷೇತ್ರದಲ್ಲಿಜೆಡಿಎಸ್‌ ಅಭ್ಯರ್ಥಿಗಳನ್ನು ಸೋಲಿಸಲು ಕಾಂಗ್ರೆಸ್‌, ಬಿಜೆಪಿ ಒಂದಾಗಿದ್ದರುಎಂಬ ರೇವಣ್ಣ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಚುನಾವಣೆ ಮುಗಿದು
ಹೋಗಿದೆ. ಹಿಂದಿನ ಚುನಾವಣೆ ಬಗ್ಗೆ ಯೋಚನೆ ಮಾಡಲ್ಲ. ಮುಂಬರುವಚುನಾವಣೆ ಬಗ್ಗೆ ಗಮನ ಹರಿಸುತ್ತೇವೆ ಎಂದು ಉತ್ತರಿಸಿದರು.

ADVERTISEMENT

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಹೈಕಮಾಂಡ್‌ ತೀರ್ಮಾನವೇಅಂತಿಮ. ಚುನಾವಣೆ ನಂತರ ಶಾಸಕರು ಹಾಗೂ ಮುಖಂಡರು ಯಾರನ್ನುನಿರ್ಧರಿಸುತ್ತಾರೆ ಅವರೇ ಸಿ.ಎಂ. ಪಕ್ಷದಲ್ಲಿ ಗುಂಪುಗಾರಿಕೆಗೆ ಅವಕಾಶವಿಲ್ಲ.ಎಲ್ಲ ಪಕ್ಷದಲ್ಲೂ ಮುಖ್ಯಮಂತ್ರಿ ಆಯ್ಕೆ ವಿಚಾರ ಚರ್ಚೆಯಲ್ಲಿ ಇರುತ್ತದೆ.ಯಾವುದೇ ಜಿಲ್ಲೆಗೆ ಹೋದರೂ ಅಲ್ಲಿ ಅವರು ತಮಗೆ ಬೇಕಾದವರುಮುಖ್ಯಮಂತ್ರಿ ಅಗಲಿ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಎಂದರು.

ರಾಜ್ಯ ಸರ್ಕಾರ ಕೋವಿಡ್ ಸಾವಿನ ಸಂಖ್ಯೆಯನ್ನು ಮಾರೆ ಮಾಚುತ್ತಿದೆ.ರಾಜ್ಯದಲ್ಲಿ ಈವರೆಗೆ ಅಂದಾಜು 3.50 ಲಕ್ಷ ಮಂದಿ ಕೋವಿಡ್‌ ನಿಂದ ಮೃತಪಟ್ಟಿದ್ದಾರೆ. ಆದರೆ ಸರ್ಕಾರ 30 ಸಾವಿರ ಮಾತ್ರ ಲೆಕ್ಕ ಕೊಡುತ್ತಿದೆ.
ಇದರಿಂದ ಪರಿಹಾರ ಸಿಗದೆ ಎಷ್ಟೋ ಬಡ ಕುಟುಂಬಗಳಿಗೆ ಅನ್ಯಾಯವಾಗಿದೆಎಂದು ತಿಳಿಸಿದರು.


ಕಾಂಗ್ರೆಸ್ ಪಕ್ಷದ ವತಿಯಿಂದ ಜುಲೈ 1 ರಿಂದ 31 ರವರೆಗೆ ’ಸಹಾಯಸ್ತ’ಕಾರ್ಯಕ್ರಮ ಹಮ್ಮಿಕೊಂಡಿದ್ದು, ಮೃತರ ಮನೆಗಳಿಗೆ ಭೇಟಿ ಮಾಡಿ ಯಾವಕಾರಣಕ್ಕಾಗಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸಿ
ಸರ್ಕಾರ ಹಾಗೂ ಜಿಲ್ಲಾಧಿಕಾರಿಗೆ ವರದಿ ನೀಡಿ, ಪರಿಹಾರ ಕೊಡಿಸುವ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು.

ಮಾಜಿ ಸಚಿವ ಎ.ಮಂಜು ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತ ಪ್ರಶ್ನೆಗೆಉತ್ತರಿಸಿದ ಅವರು, ‘ಮರಳಿ ಪಕ್ಷ ಸೇರ ಬಯಸುವವರು ಅರ್ಜಿಹಾಕಿಕೊಳ್ಳಲಿ. ಅಧಿಕಾರಕ್ಕಾಗಿ ಪಕ್ಷದಿಂದ ಹೊರ ಹೋದವರು ಮತ್ತೆ ಪಕ್ಷಕ್ಕೆ
ಸೇರಬೇಕಾದರೆ ಅದಕ್ಕಾಗಿಯೇ ಒಂದು ನೋಡಲ್‌ ಸಮಿತಿ ರಚಿಸಲಾಗಿದೆ.ಪಕ್ಷದ ತತ್ವ ಸಿದ್ದಾಂತ ಒಪ್ಪಿ ನಡೆದುಕೊಳ್ಳುವುದಾದರೆ ಬರಬಹುದು. ಅಧಿಕಾರದ ಆಸೆಯಿಂದ ಪಕ್ಷಕ್ಕೆ ಬರುವವರಿಗೆ ಪಕ್ಷದಲ್ಲಿ ಅವಕಾಶವಿಲ್ಲ’
ಎಂದು ಪ್ರತಿಕ್ರಿಯಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌. ಧ್ರುವನಾರಾಯಣ್ ಮಾತನಾಡಿ, ತೈಲ ಬೆಲೆ ಏರಿಕೆ ವಿರುದ್ಧ ರಾಜ್ಯವನ್ನು ಪ್ರತಿನಿಧಿಸುವ ಬಿಜೆಪಿ ಸಂಸದರು ಧ್ವನಿಯೆತ್ತಿಲ್ಲ.25 ಜನ ಸಂಸದರ ಜೊತೆ ಹಾಸನದ ಸಂಸದರಿಗೂ ಧ್ವನಿ ಇಲ್ಲದಾಗಿದೆ. ಕೋಮುವಾದಿ ಪಕ್ಷಕ್ಕೆ ಅಧಿಕಾರ ನೀಡಬಾರದೆಂಬ ಕಾರಣಕ್ಕೆ ಸಮ್ಮಿಶ್ರಸರ್ಕಾರದ ಅವಧಿಯಲ್ಲಿ ಜೆಡಿಎಸ್‍ಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕಾಯಿತು.ಜೆಡಿಎಸ್‌ ಅವಕಾಶವಾದಿ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದರು.

ಗೋಷ್ಠಿಯಲ್ಲಿ ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ,ಜಿಲ್ಲಾ ಘಟಕದ ಅಧ್ಯಕ್ಷ ಜಾವಗಲ್‌ ಮಂಜುನಾಥ್‌, ಮುಖಂಡರಾದಬಿ.ಶಿವರಾಂ, ಬಿ.ಪಿ.ಮಂಜೇಗೌಡ, ಎಚ್.ಕೆ.ಜವರೇಗೌಡ, ಸಿ.ಎಸ್.ಪುಟ್ಟೇಗೌಡ, ಎಚ್.ಕೆ.ಮಹೇಶ್, ದೇವರಾಜೇಗೌಡ, ಬನವಾಸೆ ರಂಗಸ್ವಾಮಿ, ಬಿಬಿಎಂಪಿ ಮಾಜಿ ಮೇಯರ್ ಹುಚ್ಚಪ್ಪ, ಮಂಜುನಾಥ್ ಬಂಡಾರಿ
ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.