ADVERTISEMENT

ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ: ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟನೆ

ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2020, 13:05 IST
Last Updated 26 ನವೆಂಬರ್ 2020, 13:05 IST

‌ಹಾಸನ: ಬಿಜೆಪಿಯಲ್ಲಿ ಮೂಲ, ವಲಸಿಗರು ಎಂಬ ಯಾವುದೇ ಭೇದ ಭಾವ ಇಲ್ಲ. ಎಲ್ಲರೂ ಒಂದೇ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿ.ಎಂ ಬದಲಾವಣೆ ಪ್ರಶ್ನೆಯೇ ಇಲ್ಲ. 105 ರಿಂದ ಅಥವಾ 17 ಮಂದಿ ಶಾಸಕರಿಂದ ಬಿಜೆಪಿ ಸರ್ಕಾರ ರಚನೆ ಆಯಿತು ಎಂಬ ಪ್ರಶ್ನೆ ಬರುವುದಿಲ್ಲ. ಹೈಕಮಾಂಡ್ ತೀರ್ಮಾನದಂತೆ ಎಲ್ಲರೂ ನಡೆದುಕೊಳ್ಳಲಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಬಗ್ಗೆ ವರಿಷ್ಠರು ನಿರ್ಧಾರ ಕೈಗೊಳ್ಳುವರು. ಪಕ್ಷದಲ್ಲಿ ಯಾವುದೇ ಗೊಂದಲ್ಲ ಇಲ್ಲ ಎಂದು ಸ್ಪಷ್ಟಪಡಿಸಿದರು.

ಜಲಸಂಪನ್ಮೂಲ ಸಚಿವ ರಮೇಶ್‌ ಜಾರಿಕಿ ಹೊಳಿ ಅವರು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದ ಸಚಿವರೊಂದಿಗೆ ಚರ್ಚಿಸಲು ದೆಹಲಿಗೆ ತೆರಳಿದ್ದಾರೆ. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ಹೊಳೆನರಸೀಪುರದ ಗ್ರೀನ್ ವುಡ್‌ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿರುವ ಬಗ್ಗೆ ದೂರು ಕೇಳಿ ಬಂದಿದೆ. ಇಂತಹ ಶಾಲೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವಿಚಾರವಾಗಿ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿ, ಇಂತಹ ಪ್ರಕರಣ ಮರುಕಳಿಸದಂತೆ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.