ADVERTISEMENT

ಅರಸೀಕೆರೆ: ವಿದ್ಯುತ್ ತಂತಿ ತುಳಿದು ಮೂರು ಕರಡಿ ಸಾವು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2024, 14:20 IST
Last Updated 8 ಅಕ್ಟೋಬರ್ 2024, 14:20 IST
ವಿದ್ಯುತ್ ತಂತಿ ತುಳಿದು ಮೃತಪಟ್ಟಿರುವ ಕರಡಿಗಳು
ವಿದ್ಯುತ್ ತಂತಿ ತುಳಿದು ಮೃತಪಟ್ಟಿರುವ ಕರಡಿಗಳು   

ಹಾಸನ: ಅರಸೀಕೆರೆ ತಾಲ್ಲೂಕಿನ ಕಲ್ಲುಸಾದರಹಳ್ಳಿಯಲ್ಲಿ ಮಂಗಳವಾರ ಬೆಳಗಿನ ಜಾವ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು 6 ವರ್ಷದ ಗಂಡು ಮತ್ತು ಹೆಣ್ಣು ಕರಡಿ ಹಾಗೂ ಒಂದು ವರ್ಷದ ಮರಿ ಕರಡಿ ಮೃತಪಟ್ಟವು.

ಭಾರಿ ಮಳೆ-ಗಾಳಿಗೆ ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯ ಸಮೀಪದಲ್ಲೇ ಆಹಾರ ಅರಸಿ ಬರುತ್ತಿದ್ದ ವೇಳೆ ದುರ್ಘಟನೆ ನಡೆದಿದೆ. ಮಳೆ ಸುರಿದ ಹರ್ಷದಲ್ಲಿ ಬಂದಾಗ ಕರಡಿಗಳ ಮೃತದೇಹಗಳನ್ನು ಕಂಡ ರೈತರು ಸೆಸ್ಕ್‌ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT