ಅರಕಲಗೂಡು: ಜಿಲ್ಲಾ ಮತ್ತು ತಾಲ್ಲೂಕು ತಂಬಾಕು ಕೋಶದ ವತಿಯಿಂದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಪುಷ್ಪಲತಾ ನೇತೃತ್ವದಲ್ಲಿ ಪಟ್ಟಣದಲ್ಲಿ ಬುಧವಾರ ತಂಬಾಕು ಉತ್ಪನ್ನಗಳ ಮಾರಾಟ ನಡೆಸುತ್ತಿದ್ದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ₹ 2,890 ದಂಡ ವಿಧಿಸಲಾಯಿತು.
ಕೋರ್ಟ್ ಮುಂಭಾಗದ ರಸ್ತೆ, ಗೊರೂರು ರಸ್ತೆ ಹಾಗೂ ಐಟಿಐ ಕಾಲೇಜು ಮುಂಭಾಗ ರಸ್ತೆಗಳಲ್ಲಿ 55 ಅಂಗಡಿಗಳ ಮೇಲೆ ಕಾರ್ಯಾಚರಣೆ ನಡೆಸಲಾಯಿತು. ತಂಬಾಕು ನಿಯಂತ್ರಣ ಕಾಯ್ದೆಯ ಉಲ್ಲಂಘನೆಗೆ ಮುಂದೆ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಯಿತು.
ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ, ಪರಮೇಶ್, ಜಿಲ್ಲಾ ತಂಬಾಕು ಕೋಶದ ಸಂಯೋಜಕಿ ಮಮತಾ, ಕುಮಾರ್, ಪೊಲೀಸ್ ಸಿಬ್ಬಂದಿ ಕುಮಾರ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.