ಸಕಲೇಶಪುರ: ತಾಲ್ಲೂಕಿನ ದೋಣಿಗಾಲ್ ಸಮೀಪ ದೊಡ್ಡತಪ್ಪಲೆ ಬಳಿ ಬೆಂಗಳೂರು– ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಗುಂಡಿಗೆ ಇಳಿದ 12 ಚಕ್ರದ ಲಾರಿಯೊಂದು ಕೆಟ್ಟು ನಿಂತಿದ್ದರಿಂದ ಸುಮಾರು 2 ಗಂಟೆ ವಾಹನ ಸಂಚಾರ ಸ್ಥಗಿತಗೊಂಡು ಪ್ರಯಾಣಿಕರು ಹಾಗೂ ಸರಕು ಸಾಗಣೆ ವಾಹನ ಸಂಚಾರಕ್ಕೆ ಅಡ್ಡಿಯಾಯಿತು.
ರಸ್ತೆ ಮಧ್ಯೆದಲ್ಲಿಯೇ ಲಾರಿ ಕೆಟ್ಟು ನಿಂತಿದ್ದರಿಂದ ಕಿರಿದಾಗಿರುವ ಈ ರಸ್ತೆಯಲ್ಲಿ ಕಿ.ಮೀ. ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು. ಪೊಲೀಸರು ಸಹ ಸ್ಥಳಕ್ಕೆ ಧಾವಿಸಿ ಲಾರಿ ಬದಿಗೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಡಲು ಹರಸಾಹಸ ಪಡಬೇಕಾಯಿತು.
ಮಾರನಹಳ್ಳಿಯಿಂದ ಆಲೂರುವರೆಗೂ ಹೆದ್ದಾರಿಯಲ್ಲಿ ದೊಡ್ಡ ದೊಡ್ಡ ಗುಂಡಿ ಬಿದ್ದು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದ್ದು ನಿತ್ಯ ಒಂದಲ್ಲಾ ಒಂದು ವಾಹನಗಳು ರಸ್ತೆ ಮಧ್ಯದಲ್ಲಿ ಕೆಟ್ಟು ನಿಲ್ಲುತ್ತವೆ. ಇದರಿಂದ ಈ ರಾಷ್ಟ್ರೀಯ ಹೆದ್ದಾರಿ ದೊಡ್ಡ ಸಮಸ್ಯೆಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.