ADVERTISEMENT

ಗುಣಮಟ್ಟದ ಶಿಕ್ಷಣ ಪಡೆಯಲು ಪ್ರಯತ್ನಿಸಿ: ಶಾಸಕ ಎ. ಮಂಜು

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 7:12 IST
Last Updated 12 ಆಗಸ್ಟ್ 2025, 7:12 IST
<div class="paragraphs"><p>ಅರಕಲಗೂಡು ತಾಲ್ಲೂಕು ಹೆಬ್ಬಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಎ. ಮಂಜು ಉದ್ಘಾಟಿಸಿದರು&nbsp;</p></div>

ಅರಕಲಗೂಡು ತಾಲ್ಲೂಕು ಹೆಬ್ಬಾಲೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಎ. ಮಂಜು ಉದ್ಘಾಟಿಸಿದರು 

   

ಅರಕಲಗೂಡು: ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ಹುದ್ದೆಗೆ ಏರಲು ಪ್ರಯತ್ನ ನಡೆಸಬೇಕು ಎಂದು ಶಾಸಕ ಎ.ಮಂಜು ಸಲಹೆ ನೀಡಿದರು.

ತಾಲ್ಲೂಕಿನ ಹೆಬ್ಬಾಲೆ ಗ್ರಾಮದ ಸರ್ಕಾರಿ ಪದವಿ ಪೂರ್ವಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕ್ರೀಡೆ, ಸಾಂಸ್ಕೃತಿಕ, ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ‘ಇಂದಿನ ಸ್ಫರ್ಧಾತ್ಮಕ ಯುಗದಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಮನಗರ ಪ್ರದೇಶದ ವಿದ್ಯಾರ್ಥಿಗಳೊಂದಿಗೆ ಪೈಪೋಟಿ ನಡೆಸುವುದು ಅನಿವಾರ್ಯವಾಗಿದೆ. ಹೀಗಾಗಿ ಕಲಿಕೆಗೆ ಹೆಚ್ಚಿನ ಒತ್ತು ನೀಡಬೇಕು. ಅಂಕ ಗಳಿಕೆಯರ ಜತೆಗೆ ಕಲಿತ ವಿದ್ಯೆಯನ್ನು ಮನನ ಮಾಡಿಕೊಂಡಲ್ಲಿ ಭವಿಷ್ಯದ ಬದುಕಿನಲ್ಲಿ ಉನ್ನತ ಸಾಧನೆಗೆ ನೆರವಾಗಲಿದೆ’ ಎಂದರು.

ADVERTISEMENT

ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನೀಡಿ ಗೌರವಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗೌರಮ್ಮ, ಉಪಾಧ್ಯಕ್ಷೆ ಜಯಲಕ್ಷ್ಮೀ, ಸಿಡಿಸಿ ಉಪಾಧ್ಯಕ್ಷ ಜಯರಾಮ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.