ADVERTISEMENT

ಬೇಲೂರು ದೇಗುಲ ಇಒ ಆಗಿ ಉಮಾ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2020, 14:44 IST
Last Updated 15 ಸೆಪ್ಟೆಂಬರ್ 2020, 14:44 IST
ಬೇಲೂರು ಚನ್ನಕೇಶವಸ್ವಾಮಿ ದೇಗುಲದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಮಾ ಅವರಿಗೆ ವಿಧ್ಯುಲ್ಲತಾ ಅಧಿಕಾರ ಹಸ್ತಾಂತರಿಸಿದರು
ಬೇಲೂರು ಚನ್ನಕೇಶವಸ್ವಾಮಿ ದೇಗುಲದ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಮಾ ಅವರಿಗೆ ವಿಧ್ಯುಲ್ಲತಾ ಅಧಿಕಾರ ಹಸ್ತಾಂತರಿಸಿದರು   

ಬೇಲೂರು: ಇಲ್ಲಿನ ಚನ್ನಕೇಶವ ಸ್ವಾಮಿದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿಯಾಗಿ ಉಮಾ ಅವರು ಅಧಿಕಾರ ವಹಿಸಿಕೊಂಡರು.

ಈವರೆಗೆ ಕಾರ್ಯನಿರ್ವಹಿಸುತ್ತಿದ್ದ ವಿಧ್ಯುಲ್ಲತಾ ಅವರಿಗೆ ಸರ್ಕಾರ ವರ್ಗಾವಣೆ ಮಾಡಿದ್ದರಿಂದ ಅವರು ಉಮಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಅಧಿಕಾರ ಸ್ವೀಕರಿಸಿದ ಉಮಾ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ‘ಮೈಸೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದನನಗೆ ಬಡ್ತಿ ನೀಡಿ ಈ ದೇಗುಲಕ್ಕೆ ವರ್ಗಾವಣೆ ಮಾಡಿದೆ. ಬೇಲೂರು ವಿಶ್ವ ವಿಖ್ಯಾತ ತಾಣವಾಗಿದ್ದು, ಇಲ್ಲಿಗೆ ಪ್ರವಾಸಿಗರು ಹಾಗೂ ಭಕ್ತರು ಹೆಚ್ಚು ಬರುತ್ತಾರೆ. ಭಕ್ತರ ಅನುಕೂಲಕ್ಕೆ ತಕ್ಕಂತೆ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಿ, ದೇಗುಲದ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದರು.

ADVERTISEMENT

ಈ ಸಂದರ್ಭದಲ್ಲಿ ವಿಜಯಲಕ್ಷ್ಮಿ, ಸಂಪತ್, ಲಕ್ಷ್ಮಣ್ ಹಾಗೂ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.