ADVERTISEMENT

‘ಶುಚಿ’ ಪುನರ್‌ ಆರಂಭಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2020, 13:24 IST
Last Updated 19 ಡಿಸೆಂಬರ್ 2020, 13:24 IST
ಕಾಂಗ್ರೆಸ್‌ ಜಿಲ್ಲಾ ಮಹಿಳಾ ಘಟಕದಿಂದ ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಕಾಂಗ್ರೆಸ್‌ ಜಿಲ್ಲಾ ಮಹಿಳಾ ಘಟಕದಿಂದ ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.   

ಹಾಸನ: ಹೆಣ್ಣು ಮಕ್ಕಳಿಗೆ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ಉಚಿತವಾಗಿ ಪೂರೈಸುವ ‘ಶುಚಿ’ ಯೋಜನೆಯನ್ನು ಸರ್ಕಾರ ಪುನರ್‌ ಆರಂಭಿಸಬೇಕು ಎಂದು ಆಗ್ರಹಿಸಿ ಕಾಂಗ್ರೆಸ್‌ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಡಿ. ತಾರಾ ಚಂದನ್ ನೇತೃತ್ವದಲ್ಲಿ ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಗ್ರಾಮೀಣ ಭಾಗಗಳಲ್ಲಿ ಹೆಣ್ಣು ಮಕ್ಕಳ ಪರಿಸ್ಥಿತಿ ಶೋಚನೀಯವಾಗಿದ್ದು, ಋತು ಚಕ್ರದ ಅವಧಿಯಲ್ಲಿ ಈಗಲೂ ಹಳೆಯಬಟ್ಟೆಗಳನ್ನು ಬಳಸಲಾಗುತ್ತಿದೆ. ಅನೈರ್ಮಲ್ಯದಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಕೋವಿಡ್‌ ನೆಪ ಹೇಳಿ ಯೋಜನೆ ಸ್ಥಗಿತ ಮಾಡಬಾರದು ಎಂದು ಆಗ್ರಹಿಸಿದರು.

ಬಡ ಹೆಣ್ಣು ಮಕ್ಕಳಿಗೆ ಉಚಿತವಾಗಿ ಸ್ಯಾನಿಟರಿ ನ್ಯಾಪ್‌ಕಿನ್‌ಗಳನ್ನು ನೀಡಲು ಕೂಡಲೇ ಕ್ರಮ ಕೈಗೊಳ್ಳಬೇಕು. ಗ್ರಾಮೀಣ ಹೆಣ್ಣು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಯೋಜನೆ ಜಾರಿಗೆ ಸರ್ಕಾರ ತಕ್ಷಣ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.