ADVERTISEMENT

ಹಾಸನ: ಬಿಸ್ಲೆ ಘಾಟಿನ ತಿರುವಿನಲ್ಲಿ ವ್ಯಾನ್‌ ಪಲ್ಟಿ; ಹಲವರಿಗೆ ಗಾಯ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2025, 7:21 IST
Last Updated 30 ಅಕ್ಟೋಬರ್ 2025, 7:21 IST
   

ಹೆತ್ತೂರು: ಇಲ್ಲಿನ ವನಗೂರು ಗ್ರಾಮದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವ್ಯಾನ್‌ ಪ್ರಪಾತಕ್ಕೆ ಬಿದ್ದಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ವ್ಯಾನ್‌ 20 ಅಡಿ ಆಳದ ಪ್ರಪಾತಕ್ಕೆ ಬಿದ್ದಿದೆ. 

ವ್ಯಾನ್‌ನಲ್ಲಿ 30 ಜನರಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ. ಮದುವೆಗೆ ಹೋಗುತ್ತಿದ್ದ ವೇಳೆ ಬಿಸ್ಲೆ ಘಾಟಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.