ಹಾಸನ: ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಮಡೆನೂರು ಗೇಟ್ ಬಳಿ ಗುರುವಾರ ಬೆಳಗಿನ ಜಾವ ನಡೆದಿದೆ.
ಆಹಾರ ಹುಡುಕಿಕೊಂಡು ಮಡೆನೂರು ಗ್ರಾಮದತ್ತ ಬಂದಿದ್ದ ಎಂಟು ವರ್ಷದ ಹೆಣ್ಣು ಚಿರತೆ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನಕ್ಕೆ ಸಿಲುಕಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.