ಹಿರೀಸಾವೆ: ರಾಷ್ಟ್ರೀಯ ಹೆದ್ದಾರಿ 75ರ ಹೊನ್ನೇನಹಳ್ಳಿ ಬಳಿ ಅಕ್ರಮವಾಗಿ ಕಸಾಯಿಖಾನೆಗೆ ಕರುಗಳನ್ನು ಸಾಗಿಸುತ್ತಿದ್ದ ಮಾರುತಿ ವ್ಯಾನ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಉರುಳಿ ಬಿದ್ದ ಘಟನೆ ಶನಿವಾರ ನಡೆದಿದೆ.
ಚನ್ನರಾಯಪಟ್ಟಣ ಕಡೆಯಿಂದ ಬೆಂಗಳೂರು ಕಡೆಗೆ ಈ ವ್ಯಾನ್ ತೆರಳುತ್ತಿತ್ತು. ಮಧ್ಯಾಹ್ನ ಬಿರುಸಿನ ಮಳೆ ಬಂದು ರಸ್ತೆ ಪಕ್ಕದಲ್ಲಿ ನಿಯಂತ್ರಣಕ್ಕೆ ಸಿಗದೆ, ರಸ್ತೆ ಪಕ್ಕದ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.
ಕಾರಿನಲ್ಲಿ ಮೂರು ಸಿಂಧಿ ಕರುಗಳನ್ನು ಸಾಗಿಸಲಾಗುತ್ತಿತ್ತು. ಸ್ಥಳಿಯರು ಕರುಗಳನ್ನು ರಕ್ಷಣೆ ಮಾಡಿದ್ದಾರೆ. ಚಾಲಕನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ಸಾಗಿಸಲಾಗಿದೆ.
‘ಪೊಲೀಸರು ಪ್ರಕರಣ ದಾಖಲಿಸಿ, ಕರುಗಳನ್ನು ಗೋ ಶಾಲೆಗೆ ಬಿಡಲಾಗುವುದು’ ಎಂದು ಎಸ್ಐ ರೂಪಾ ಬಿರಾದಾರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.