ADVERTISEMENT

ಹಾಸನ: ಬಿಜೆಪಿ ಅಭ್ಯರ್ಥಿ ಎಚ್.ಎಂ. ವಿಶ್ವನಾಥ್ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 6:57 IST
Last Updated 23 ನವೆಂಬರ್ 2021, 6:57 IST
ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ ಮಂಗಳವಾರ ನಾಮಪತ್ರ ಸಲ್ಲಿಸಿದರು.
ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ ಮಂಗಳವಾರ ನಾಮಪತ್ರ ಸಲ್ಲಿಸಿದರು.   

ಹಾಸನ: ವಿಧಾನ ಪರಿಷತ್ ಹಾಸನ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಎಚ್.ಎಂ.ವಿಶ್ವನಾಥ ಮಂಗಳವಾರ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿ ಆರ್.ಗಿರೀಶ್ ಅವರಿಗೆ ಎರಡು ಸೆಟ್ ನಾಮಪತ್ರ ಸಲ್ಲಿಸಿದರು. ಮಧ್ಯಾಹ್ನ 12.05ಕ್ಕೆ ನಾಮಪತ್ರ ಸಲ್ಲಿಸಿ, ಪ್ರತಿಜ್ಞೆ ಸ್ವೀಕರಿಸಿದರು.

ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕ ಪ್ರೀತಂ ಗೌಡ, ಮುಖಂಡರಾದ ಎ‌.ಮಂಜು, ರೇಣುಕುಮಾರ್ ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.