ADVERTISEMENT

ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಸಾವು: ಆರೋಪ

ಎಸ್‌ಡಿಎಂ ಎದುರು ಸಂಬಂಧಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2019, 15:27 IST
Last Updated 13 ಜುಲೈ 2019, 15:27 IST
ಸೋಮಸುಂದರ್‌
ಸೋಮಸುಂದರ್‌   

ಹಾಸನ: ‘ವೈದ್ಯರ ನಿರ್ಲಕ್ಷ್ಯದಿಂದ ರೋಗಿ ಮೃತಪಟ್ಟಿದ್ದಾರೆ’ ಎಂದು ಆರೋಪಿಸಿ ಮೃತನ ಸಂಬಂಧಿಕರು ಮತ್ತು ಸ್ನೇಹಿತರು ನಗರದ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಅರಕಲಗೂಡು ತಾಲ್ಲೂಕಿನ ನೆಲಮನೆ ಗ್ರಾಮದ ಸೋಮ ಸುಂದರ್ (36) ಅವರು ಶುಕ್ರವಾರ ಹರ್ನಿಯಾ ಆಪರೇಷನ್‍ಗೆಂದು ಆಸ್ಪತ್ರೆಗೆ ದಾಖಲಾಗಿದ್ದರು.

‘ರಾತ್ರಿ ಆಪರೇಷನ್ ಮಾಡಲು ಅನಸ್ತೇಷಿಯಾ ನೀಡಿದ ಪರಿಣಾಮ ಆಪರೇಷನ್ ಥಿಯೇಟರ್‌ನಲ್ಲಿಯೇ ಮೃತಪಟ್ಟಿದ್ದಾರೆ. ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಪ್ರಮುಖ ಕಾರಣ‌’ ಎಂದು ಮೃತನ ಪತ್ನಿ ಆರೋಪಿಸಿದರು.

ADVERTISEMENT

‘ಸಾವಿನ ಸುದ್ದಿಯನ್ನು ಸಂಬಂಧಿಕರಿಗೆ ತಿಳಿಸದೆ ಆಸ್ಪತ್ರೆ ಸಿಬ್ಬಂದಿ ಮೃತದೇಹವನ್ನು ಆಂಬುಲೆನ್ಸ್‌ ನಲ್ಲಿ ಇರಿಸಿದ್ದಾರೆ. ಇದು ಹಲವು ಅನುಮಾನಗಳಿಗೆ ಎಡೆ ಮಾಡಿ ಕೊಟ್ಟಿದೆ. ನ್ಯಾಯ ದೊರಕಿಸಿಕೊಡಬೇಕು’ ಎಂದು ಸಂಬಂಧಿಕರು ಆಗ್ರಹಿಸಿದರು.

ಸ್ಥಳಕ್ಕೆ ಪೆನ್ ಷನ್ ಮೊಹಲ್ಲಾ ಪೊಲೀಸರು ಭೇಟಿ ನೀಡಿ ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಸಂಬಂಧಿಕರಿಂದ ಹೇಳಿಕೆ ಪಡೆದುಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.