ADVERTISEMENT

ಯುವಕರಲ್ಲಿ ಹೃದಯಾಘಾತ: ಆತಂಕ

ಚನ್ನರಾಯಪಟ್ಟಣ: ಹೃದಯದ ಆರೋಗ್ಯಕ್ಕಾಗಿ ನಡಿಗೆ ಜಾಥಾ

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 4:25 IST
Last Updated 24 ಜುಲೈ 2025, 4:25 IST
ಚನ್ನರಾಯಪಟ್ಟಣದಲ್ಲಿ ಹೃದಯದ ಆರೋಗ್ಯದ ಕುರಿತು ಬುಧವಾರ ಏರ್ಪಡಿಸಿದ್ದ ನಡಿಗೆ ಜಾಥಾದಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ, ತಹಶೀಲ್ದಾರ್ ಜಿ.ಎಸ್. ಶಂಕರಪ್ಪ, ಪುರಸಭಾಧ್ಯಕ್ಷ ಸಿ.ಎನ್. ಮೋಹನ್ ಸೇರಿ ಅಧಿಕಾರಿಗಳು, ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು
ಚನ್ನರಾಯಪಟ್ಟಣದಲ್ಲಿ ಹೃದಯದ ಆರೋಗ್ಯದ ಕುರಿತು ಬುಧವಾರ ಏರ್ಪಡಿಸಿದ್ದ ನಡಿಗೆ ಜಾಥಾದಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ, ತಹಶೀಲ್ದಾರ್ ಜಿ.ಎಸ್. ಶಂಕರಪ್ಪ, ಪುರಸಭಾಧ್ಯಕ್ಷ ಸಿ.ಎನ್. ಮೋಹನ್ ಸೇರಿ ಅಧಿಕಾರಿಗಳು, ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು   

ಚನ್ನರಾಯಪಟ್ಟಣ: ಪಟ್ಟಣದ ಆಂಜನೇಯಸ್ವಾಮಿ ದೇಗುಲದ ಬಳಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ತಾಲ್ಲೂಕು ಆರೋಗ್ಯಾಧಿಕಾರಿ ಕಚೇರಿ, ಸಾರ್ವಜನಿಕ ಆಸ್ಪತ್ರೆ, ರೋಟರಿ ಕ್ಲಬ್, ಲಯನ್ಸ್ ಕ್ಲಬ್, ರೆಡ್‍ಕ್ರಾಸ್ ಸಂಸ್ಥೆ, ಸ್ವಾಮಿ ವಿವೇಕಾನಂದ ಯೋಗ ಕೇಂದ್ರದ ಸಹಯೋಗದಲ್ಲಿ ಏರ್ಪಡಿಸಿದ್ದ ಹೃದಯ ಆರೋಗ್ಯಕ್ಕಾಗಿ ನಡಿಗೆ ಜಾಥಾಕ್ಕೆ ಶಾಸಕ ಸಿ.ಎನ್. ಬಾಲಕೃಷ್ಣ ಬುಧವಾರ ಚಾಲನೆ ನೀಡಿದರು.

ಇತ್ತೀಚಿನ ದಿನಗಳಲ್ಲಿ ಹೃದಯಘಾತದ ಪ್ರಕರಣಗಳು ಹೆಚ್ಚಾಗುತ್ತಿವೆ. ಅದರಲ್ಲೂ ಯುವಕರಲ್ಲಿ ಹೃದಯಘಾತ ಪ್ರಕರಣ ಹೆಚ್ಚು ಪ್ರಮಾಣದಲ್ಲಿ ಕಂಡು ಬರುತ್ತಿದೆ. ಹೃದಯದ ಆರೋಗ್ಯ ಚೆನ್ನಾಗಿರಬೇಕಾದರೆ ಆರೋಗ್ಯಕರ ಆಹಾರ ಸೇವಿಸಬೇಕು. ಪ್ರತಿನಿತ್ಯ ಯೋಗಾಸನ, ಪ್ರಾಣಾಯಾಮ, ಧ್ಯಾನ, ವ್ಯಾಯಾಮ ಮಾಡಬೇಕು. ಕಾಲಕಾಲಕ್ಕೆ ಆರೋಗ್ಯದ ತಪಾಸಣೆ ಮಾಡಿಸಬೇಕು. ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವ ದೃಷ್ಟಿಯಿಂದ ಹೃದಯ ಆರೋಗ್ಯಕ್ಕಾಗಿ ನಡಿಗೆ ಜಾಥಾ ಆಯೋಜಿಸಲಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಯುವರಾಜ್ ಮಾತನಾಡಿ, ಹೃದಯವು ದೇಹದ ಪ್ರಮುಖ ಅಂಗ ಮತ್ತು ಅದರ ಆರೋಗ್ಯವನ್ನು ಕಾಪಾಡುವುದು ಬಹಳ ಮುಖ್ಯ. ಹೃದಯದ ಆರೋಗ್ಯದ ಕುರಿತು ಕಾಳಜಿ ವಹಿಸುವುದರಿಂದ ಹೃದಯಾಘಾತ ಮತ್ತು ಪಾರ್ಶ್ವವಾಯು ತಡೆಗಟ್ಟಬಹುದು ಎಂದು ತಿಳಿಸಿದರು.

ADVERTISEMENT

ತಹಶೀಲ್ದಾರ್ ಜಿ.ಎಸ್. ಶಂಕರಪ್ಪ, ಪುರಸಭಾಧ್ಯಕ್ಷ ಸಿ.ಎನ್. ಮೋಹನ್, ಮುಖ್ಯಾಧಿಕಾರಿ ಆರ್. ಯತೀಶ್‍ಕುಮಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಹರೀಶ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎ.ಆರ್. ಅನಿತಾ, ಪರಿಸರವಾದಿ ಸಿ.ಎನ್. ಅಶೋಕ್, ಸಮಾಜಸೇವಕ ಸಿ.ಎಸ್. ಮನೋಹರ್, ರೋಟರಿ ಕ್ಲಬ್ ಅಧ್ಯಕ್ಷೆ ಎನ್.ಬಿ. ಜ್ಯೋತಿ, ಲಯನ್ಸ್ ಕ್ಲಬ್ ಅಧ್ಯಕ್ಷ ಗಿರೀಶ್, ತಾಲ್ಲೂಕು ಆರೋಗ್ಯಾಧಿಕಾರಿ ತೇಜಸ್ವಿನಿ ಸೇರಿ ವಿವಿಧ ಸಂಘ,ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು. ನಂತರ ಪಟ್ಟಣದ ಪ್ರಮುಖ ಬೀದಿಯಲ್ಲಿ ಜಾಥಾ ನಡೆಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.