ಸಕಲೇಶಪುರ (ಹಾಸನ ಜಿಲ್ಲೆ): ಭಾರಿ ಮಳೆಯಿಂದಾಗಿ ತಾಲ್ಲೂಕಿನ ಮಂಜರಾಬಾದ್ ಕೋಟೆಯ ಒಂದು ಭಾಗದ ಗೋಡೆ ಶನಿವಾರ ತಡರಾತ್ರಿ ಕುಸಿದಿದೆ.
ಕೋಟೆಯ ಸೈನಿಕರು, ವಿಶ್ರಾಂತಿ ಪಡೆಯುತ್ತಿದ್ದರು ಎಂದು ಹೇಳಲಾಗುವ ಪ್ರದೇಶ ಕುಸಿದಿದೆ. ಮುಂಜಾನೆ ಕಾವಲುಗಾರ ಸಿಬ್ಬಂದಿ ಕೆಲಸಕ್ಕೆ ಬಂದ ಸಂದರ್ಭದಲ್ಲಿ ಗುರುತಿಸಿದ್ದಾರೆ.
ನಕ್ಷತ್ರ ಆಕಾರದ ಮಂಜರಾಬಾದ್ ಕೋಟೆ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಕೋಟೆಯನ್ನು ಟಿಪ್ಪು ಸುಲ್ತಾನ್ ಆಡಳಿತದ ಅವಧಿಯಲ್ಲಿ 1785ರಲ್ಲಿ ನಿರ್ಮಾಣ ಆರಂಭಿಸಿ, 1792ರಲ್ಲಿ ಪೂರ್ಣಗೊಳಿಸಲಾಗಿತ್ತು. 1956ರಿಂದ ಪುರಾತತ್ವ ಇಲಾಖೆ ಸಂರಕ್ಷಣೆ ಹೊಣೆ ಹೊತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.