ADVERTISEMENT

ಮಾರ್ಚ್‌ನಲ್ಲಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ

ಎತ್ತಿನಹೊಳೆ ಯೋಜನೆಯ ಮೊದಲನೇ ಹಂತ: ಸಚಿವ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 7 ಮೇ 2020, 12:15 IST
Last Updated 7 ಮೇ 2020, 12:15 IST
ಎತ್ತಿನಹೊಳೆ ಯೋಜನೆ ಕುರಿತು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ಅಮೃತ್‌ ಕನ್‌ಸ್ಟ್ರಕ್ಷನ್ಸ್‌ ಮುಖ್ಯಸ್ಥ ವೆಂಕಟೇಶ್ವರ್‌ ರಾವ್‌ ಮಾಹಿತಿ ನೀಡಿದರು.
ಎತ್ತಿನಹೊಳೆ ಯೋಜನೆ ಕುರಿತು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಅವರಿಗೆ ಅಮೃತ್‌ ಕನ್‌ಸ್ಟ್ರಕ್ಷನ್ಸ್‌ ಮುಖ್ಯಸ್ಥ ವೆಂಕಟೇಶ್ವರ್‌ ರಾವ್‌ ಮಾಹಿತಿ ನೀಡಿದರು.   

ಹಾಸನ: ಬಯಲು ಸೀಮೆ ಜಿಲ್ಲೆಗಳಿಗೆ ನೀರು ಪೂರೈಸುವ ಎತ್ತಿನಹೊಳೆ ಯೋಜನೆಯಲ್ಲಿ 2021ರ ಮಾರ್ಚ್‌ನಲ್ಲಿ ನೀರು ಹರಿಸುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ರಮೇಶ್‌ ಜಾರಕಿಹೊಳಿ ಭರವಸೆ ನೀಡಿದರು.

ಸಕಲೇಶಪುರದಲ್ಲಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿ ಸ್ಥಳಕ್ಕೆ ಗುರುವಾರ ಭೇಟಿ ನೀಡಿ, ಅಧಿಕಾರಿಗಳ ಜತೆ ಚರ್ಚಿಸಿದ ಬಳಿಕ ಮಾತನಾಡಿದ ಅವರು, ‌ಪ್ರಾಯೋಗಿಕವಾಗಿ 37 ಕಿ.ಮೀ. (ಆಲೂರು ತಾಲ್ಲೂಕಿನ ಅರುವನಳ್ಳಿ ಉಪಕೇಂದ್ರವರೆಗೆ) ನೀರು ಹರಿಸಲಾಗುವುದು. ನಂತರ ಅಲ್ಲಿಂದ ಇತರ ಭಾಗಗಳಿಗೆ ನೀರು ಪೂರೈಸಲು ಕ್ರಮ ವಹಿಸಲಾಗುವುದು. ನೀರಿನ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ. ಅನುದಾನ ಒದಗಿಸುವ ವಿಚಾರದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಎದುರಾಗಬಹುದು ಎಂದು ತಿಳಿಸಿದರು.

ಭೂ ಸ್ವಾಧೀನ ಮತ್ತು ಪರಿಹಾರ ವಿತರಣೆ ಪ್ರಕ್ರಿಯೆ ತ್ವರಿತಗೊಳಿಸಲಾಗುವುದು. ಮುಖ್ಯಮಂತ್ರಿ ಜತೆ ತಿಂಗಳಾಂತ್ಯಕ್ಕೆ ವಿಶೇಷ ಸಭೆ ನಡೆಸಿ ಯೋಜನೆ ಅನುಷ್ಠಾನಕ್ಕೆ ಒತ್ತು ನೀಡಲಾಗುವುದು ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.