ADVERTISEMENT

ಹೇಮಾವತಿ ಜಲಾಶಯ ಭರ್ತಿಗೆ 6 ಅಡಿ ಬಾಕಿ: ಯಾವುದೇ ಸಂದರ್ಭದಲ್ಲಿ ನದಿಗೆ ನೀರು

​ಪ್ರಜಾವಾಣಿ ವಾರ್ತೆ
Published 8 ಜುಲೈ 2022, 8:48 IST
Last Updated 8 ಜುಲೈ 2022, 8:48 IST
ಹೇಮಾವತಿ ಜಲಾಶಯ
ಹೇಮಾವತಿ ಜಲಾಶಯ    

ಹಾಸನ: ಹೇಮಾವತಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಒಳಹರಿವು ಹೆಚ್ಚಾಗಿದೆ. ಯಾವುದೇ ಸಂದರ್ಭದಲ್ಲಿ ಹೇಮಾವತಿ ಜಲಾಶಯದಿಂದ ನದಿಗೆ ನೀರನ್ನು ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮದ ಸೂಪರಿಂಟೆಂಡೆಂಟ್ ಎಂಜಿನಿಯರ್ ತಿಳಿಸಿದ್ದಾರೆ.

ಜಲಾಶಯದ ಗರಿಷ್ಠ ಮಟ್ಟ 2,922 ಅಡಿ ಇದ್ದು, ಭರ್ತಿಗೆ ಇನ್ನು 6.56 ಅಡಿ ಬಾಕಿ ಇದೆ. ಒಳಹರಿವು 18,221 ಕ್ಯುಸೆಕ್ ಇದೆ. ಸದ್ಯಕ್ಕೆ 31 ಟಿಎಂಸಿ ನೀರು ಸಂಗ್ರಹವಾಗಿದೆ.

ಯಾವುದೇ ಸಂದರ್ಭದಲ್ಲಿ ಕ್ರಸ್ಟ್ ಗೇಟ್ ಮೂಲಕ ನದಿಗೆ ನೀರನ್ನು ಬಿಡಲಾಗುವುದು. ನದಿಯ ದಡದಲ್ಲಿ‌ ವಾಸಿಸುವ ಜನರು ಮುನ್ನೆಚ್ಚರಿಕೆಯಾಗಿ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.