ADVERTISEMENT

ನೀರು ಪೂರೈಕೆ ₹ 1,500 ಕೋಟಿ ಕ್ರಿಯಾ ಯೋಜನೆ

ಅಂಗನವಾಡಿ ಕೇಂದ್ರಗಳಿಗೆ ಮೂಲ ಸೌಲಭ್ಯ: ಸಿಇಒ ಕಾಂತರಾಜ್ ಸೂಚನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2021, 3:04 IST
Last Updated 22 ಡಿಸೆಂಬರ್ 2021, 3:04 IST
ಸಕಲೇಶಪುರದಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜ್‌ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದರು, ಉಪವಿಭಾಗಾಧಿಕಾರಿ ಪ್ರತೀಕ್‌ ಬಯಾಲ್‌, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ಡಾ.ಪುನಿತ್, ಉಪಕಾರ್ಯದರ್ಶಿ (ಆಡಳಿತ) ಚಂದ್ರಶೇಖರ್, ಮುಖ್ಯ ಯೋಜನಾಧಿಕಾರಿ ಹೆಚ್.ವಿ. ನಾಗರಾಜ್. ಯೋಜನಾ ನಿರ್ದೇಶಕ ಜಿ.ಪಂ.ವಿಠಲ್ ಕಾವಳೆ ಇದ್ದಾರೆ
ಸಕಲೇಶಪುರದಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕಾಂತರಾಜ್‌ ಮಂಗಳವಾರ ಅಧಿಕಾರಿಗಳ ಸಭೆ ನಡೆಸಿದರು, ಉಪವಿಭಾಗಾಧಿಕಾರಿ ಪ್ರತೀಕ್‌ ಬಯಾಲ್‌, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ಡಾ.ಪುನಿತ್, ಉಪಕಾರ್ಯದರ್ಶಿ (ಆಡಳಿತ) ಚಂದ್ರಶೇಖರ್, ಮುಖ್ಯ ಯೋಜನಾಧಿಕಾರಿ ಹೆಚ್.ವಿ. ನಾಗರಾಜ್. ಯೋಜನಾ ನಿರ್ದೇಶಕ ಜಿ.ಪಂ.ವಿಠಲ್ ಕಾವಳೆ ಇದ್ದಾರೆ   

ಸಕಲೇಶಪುರ: ‘ಸರ್ಕಾರದ ಅನುದಾನಗಳನ್ನು ಸಮರ್ಪಕವಾಗಿ ಬಳಸಿಕೊಂಡು ಪ್ರತಿ ಗ್ರಾಮಗಳಿಗೆ ಮೂಲ ಸೌಕರ್ಯ ಕಲ್ಪಿಸಲುಅಧಿಕಾರಿ, ನೌಕರರು ದಕ್ಷತೆಯಿಂದ ಕರ್ತವ್ಯ ನಿರ್ವಹಣೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕಾಂತರಾಜ್‌ ಹೇಳಿದರು.

ಗ್ರಾಮ ಪ‍ಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಇಲ್ಲಿಯ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಕುಡಿಯುವ ನೀರು, ರಸ್ತೆ, ವಿದ್ಯುತ್‌, ಶೌಚಾಲಯ ಸೇರಿದಂತೆ ಮೂಲ ಸೌಲಭ್ಯ ಒದಗಿಸಬೇಕು.ಜಿಲ್ಲೆಯಲ್ಲಿ 4,300 ಹ್ಯಾಮ್ಲೇಟ್‌ ಗ್ರಾಮಗಳು ಸೇರಿದಂತೆ 4,625 ಗ್ರಾಮಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜಲಜೀವನ್‌ ಮಿಷನ್‌ ಯೋಜನೆ ಅಡಿಯಲ್ಲಿ ಕುಡಿಯುವ ನೀರು ಪೂರೈಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಈ ಯೋಜನೆಯಲ್ಲಿ ಶೇ 10 ರಷ್ಟು ಆರ್ಥಿಕ ನೆರವು ಸಾರ್ವಜನಿಕರಿಂದ ಕ್ರೂಢೀಕರಿಸಬೇಕಾಗಿದೆ.ಕುಡಿಯುವ ನೀರು ಪೂರೈಕೆಗಾಗಿ ₹ 1,500 ಕೋಟಿ ಕ್ರಿಯಾ ಯೋಜನೆ ಸಿದ್ದಪಡಿಸಲಾಗಿದೆ ಎಂದರು.

ADVERTISEMENT

ಹೈಕೋರ್ಟ್‌ ಆದೇಶದಂತೆ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಶೌಚಾಲಯ, ಕುಡಿಯುವ ನೀರು, ವಿದ್ಯುತ್‌ ಸಂಪರ್ಕ, ಪ್ಯಾನ್‌ ಸೌಲಭ್ಯವನ್ನು ಡಿ.31 ರೊಳಗೆ ನೀಡಲುಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಸರ್ಕಾರಿ ಶಾಲೆಗಳಿಗೆ ಶೌಚಾಲಯ ಹಾಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸಬೇಕು. ಸರ್ಕಾರಿ ನಿವೇಶನಗಳಲ್ಲಿ ಇರುವಂತಹ ಸರ್ಕಾರಿ ಶಾಲೆ ಕಾಲೇಜುಗಳಿಗೆ ಜಾಗದ ಖಾತೆ, ಕಂದಾಯ ದಾಖಲೆಗಳನ್ನು ಮಾಡಿಸಬೇಕು ಎಂದರು.

ಕಾಲಮಿತಿಯೊಳಗೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕಗಳ ಕಾಮಗಾರಿ ಪೂರ್ಣಗೊಳ್ಳಬೇಕು ಎಂದುಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಿದರು.

ಪಶ್ಚಿಮಘಟ್ಟದ ಮಲೆನಾಡಿನ ಅಂಚಿನಲ್ಲಿರುವ ಅನೇಕ ಗ್ರಾಮಗಳಿಗೆ ಮಳೆಗಾಲದಲ್ಲಿ ಹಳ್ಳ ದಾಟಿ ಹೋಗಿ ಬರುವುದಕ್ಕೆ ಸಮಸ್ಯೆ ಇದೆ. ನರೇಗಾ ಯೋಜನೆ ಅಡಿಯಲ್ಲಿ ಅಂತಹ ಗ್ರಾಮಗಳಿಗೆ ಕಿರು ಸೇತುವೆಗಳನ್ನು ನಿರ್ಮಾಣ ಮಾಡಲು ಚಿಂತನೆ ನಡೆಸಲಾಗಿದೆ ಎಂದರು.

ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್‌, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ (ಅಭಿವೃದ್ಧಿ) ಡಾ.ಪುನಿತ್, ಉಪಕಾರ್ಯದರ್ಶಿ (ಆಡಳಿತ) ಚಂದ್ರಶೇಖರ್, ಮುಖ್ಯ ಯೋಜನಾಧಿಕಾರಿ ಎಚ್.ವಿ. ನಾಗರಾಜ್. ಯೋಜನಾ ನಿರ್ದೇಶಕ ವಿಠಲ್ ಕಾವಳೆ, ಡಿಡಿಪಿಐ ಪ್ರಕಾಶ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಬಾಲಕೃಷ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಶೆಟ್ಟಪ್ಪನವರ್, ಕೃಷಿ ಇಲಾಖೆ ಉಪ ನಿರ್ದೇಶಕಿ ಸುಷ್ಮಾ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಆರ್. ಹರೀಶ್‌, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಬಿ. ಶಿವಾನಂದ್‌, ತಾ.ಪಂ. ಸಹಾಯಕ ನಿರ್ದೇಶಕ ಎಚ್‌.ಎ. ಆದಿತ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.