ADVERTISEMENT

ಸಕಲೇಶಪುರ | ಕಾಡಾನೆ ದಾಳಿ: ವೃದ್ಧೆಗೆ ಗಂಭೀರ ಗಾಯ

​ಪ್ರಜಾವಾಣಿ ವಾರ್ತೆ
Published 26 ಮೇ 2024, 14:09 IST
Last Updated 26 ಮೇ 2024, 14:09 IST
ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾ.ಪಂ. ವ್ಯಾಪ್ತಿಯ ಕೆಸಗುಲಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿರುವ ದ್ರಾಕ್ಷಾಯಿಣಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು
ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾ.ಪಂ. ವ್ಯಾಪ್ತಿಯ ಕೆಸಗುಲಿ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿರುವ ದ್ರಾಕ್ಷಾಯಿಣಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದು   

ಸಕಲೇಶಪುರ: ಕಾಡಾನೆ ದಾಳಿಯಿಂದ ತಾಲ್ಲೂಕಿನ ಕೆಸಗುಲಿ ಗ್ರಾಮದಲ್ಲಿ ಬೇಲೂರು ತಾಲ್ಲೂಕಿನ ಲಕ್ಕುಂದ ಗ್ರಾಮದ ದ್ರಾಕ್ಷಾಯಿಣಿ (60) ಗಾಯಗೊಂಡಿದ್ದಾರೆ.

ತಾಲ್ಲೂಕಿನ ಉದೇವಾರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಸಗುಲಿ ಗ್ರಾಮದ ಪುಟ್ಟ ಸ್ವಾಮಿ ಗೌಡ ಎಂಬುವರ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಈ ದಾಳಿ ನಡೆದಿದೆ. ಹೆಚ್ಚಿನ ಚಿಕಿತ್ಸೆಗಾಗಿ ಇವರನ್ನು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಪ ವಲಯ ಅರಣ್ಯಧಿಕಾರಿ ಮಹದೇವ್, ದಿನೇಶ್ ಹಾಸನದ ಆಸ್ಪತ್ರೆಗೆ ಭೇಟಿ ನೀಡಿ ವೃದ್ದೆಯ ಚಿಕಿತ್ಸಗೆ ಅರಣ್ಯ ಇಲಾಖೆಯಿಂದ ವ್ಯವಸ್ಥೆ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT