ಹಾಸನ: ಅರಕಲಗೂಡು ತಾಲ್ಲೂಕಿನ ದುಮ್ಮಿ ಮತ್ತು ಕೊರಟಿಕೆರೆ ಕಾವಲ್ ಗ್ರಾಮಗಳಲ್ಲಿ ಬುಧವಾರ ಸಂಜೆ ಬಿದ್ದ ಬಿರುಗಾಳಿ ಸಹಿತ ಮಳೆಯಿಂದ 15 ಮನೆಗಳ ಹೆಂಚು, ಶೀಟ್‌ಗಳು ಹಾರಿ ಹೋಗಿವೆ.
ವಿದ್ಯತ್ ಕಂಬಗಳು ರಸ್ತೆ, ಮನೆಗಳ ಮೇಲೆ ಉರುಳಿ ಬಿದ್ದಿವೆ. ಹಲವೆಡೆ ಮರಗಳು ನೆಲಕ್ಕೆ ಉರುಳಿವೆ. ಮೇಲ್ಚಾವಣಿಯ ಮೇಲೆ ವಿದ್ಯುತ್ ಕಂಬ ಉರುಳಿ ಸ್ವಾಮಿ ಎಂಬುವವರ ಮನೆಗೆ ಹಾನಿಯಾಗಿದೆ. ಲಕ್ಮೀಕಾಂತ್ ಎಂಬುವವರ ದನದ ಕೊಟ್ಟಿಗೆ ಶೀಟ್ ಹಾರಿ ಹೋಗಿದ್ದು, ಇಟ್ಟಿಗೆ ಮತ್ತು ಗಾರೆಯ ತುಂಡುಗಳು ಬಿದ್ದು ಜಾನುವಾರುಗಳಿಗೆ ಗಾಯವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.