ಕೊಣನೂರು: ಗಂಗೂರಿನ ಸರ್ಕಾರಿ ಆಸ್ಪತ್ರೆಯ ಕಾರ್ ಶೆಡ್ಡಿನಲ್ಲಿ ಮಹಿಳೆಯ ಶವ ಸಿಕ್ಕಿದ್ದು, ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
ಶವ ಸೋಂಪುರ ಗ್ರಾಮದ ಜಯಮ್ಮ (40) ಅವರದು ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡಿಕೊಂಡಿದ್ದ ಜಯಮ್ಮ ಪಿರಿಯಾಪಟ್ಟಣ ತಾಲ್ಲೂಕಿನ ಹಲಗನಹಳ್ಳಿಯ ಸುರೇಶ ಎಂಬುವವನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಭಾನುವಾರ ಸಂಜೆ ಸೋಂಪುರದಿಂದ ಬಸ್ ಹತ್ತಿ ಬಂದಿದ್ದ ಜಯಮ್ಮ ಸೋಮವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ.
‘ಸುರೇಶ ಜಯಮ್ಮನನ್ನು ಕರೆಸಿಕೊಂಡಿರಬಹುದು. ಮೃತ ಮಹಿಳೆಯ ಮಂಡಿ ಮತ್ತು ಮುಖದಲ್ಲಿ ಗಾಯಗಳಿದ್ದು ಸಾವಿನಲ್ಲಿ ಅನುಮಾನಗಳಿವೆ’ ಎಂದು ಮೈದುನ ನಟರಾಜ್ ಕೊಣನೂರು ಪೊಲೀಸ್ ಠಾಣಿಯಲ್ಲಿ ದೂರು ದಾಖಲಿಸಿದ್ದಾರೆ.
ಪೊಲೀಸ್ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಮೃತ ದೇಹವನ್ನು ಹಾಸನದ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.