ನುಗ್ಗೇಹಳ್ಳಿ: ‘ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ರಾಜ್ಯದಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಿವೆ. ಇದರಿಂದ ಮಹಿಳೆಯರು ಆರ್ಥಿಕವಾಗಿ ಸದೃಢಗೊಳ್ಳಲು ಗ್ಯಾರಂಟಿ ಯೋಜನೆ ಪ್ರಮುಖ ಪಾತ್ರವಹಿಸಿದೆ’ ಎಂದು ಚನ್ನರಾಯಪಟ್ಟಣ ತಾಲ್ಲೂಕು ಗ್ಯಾರಂಟಿ ಯೋಜನಾ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಲ್.ಪಿ.ಪ್ರಕಾಶ್ ಗೌಡ ಅಭಿಪ್ರಾಯಪಟ್ಟರು.
ಹೋಬಳಿ ಕೇಂದ್ರದ ವೀರಶೈವ ಭವನದಲ್ಲಿ ತಾಲೂಕು ಪಂಚಾಯಿತಿ ಚನ್ನರಾಯಪಟ್ಟಣ ಹಾಗೂ ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಗ್ಯಾರಂಟಿ ಯೋಜನಾ ಸಮಿತಿ ಹೋಬಳಿ ಮಟ್ಟದ ಜನಸ್ಪಂದನ ಸಭೆ ಉದ್ಘಾಟಿಸಿ ಮಾತನಾಡಿದರು.
ತಾಲ್ಲೂಕಿಗೆ ಪ್ರತಿ ತಿಂಗಳು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಸುಮಾರು ₹25.76 ಕೋಟಿ ಅನುದಾನ ದೊರಕುತ್ತಿದೆ’ ಎಂದರು.
ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಣಾಧಿಕಾರಿ ಹರೀಶ್, ಗ್ಯಾರಂಟಿ ಯೋಜನೆಗಳ ಬಗ್ಗೆ ಅಂಕಿ–ಅಂಶ ನೀಡಿದರು.
ಸಭೆಯಲ್ಲಿ ರಾಜ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳಿಗೆ ಹೋಬಳಿ ಕೇಂದ್ರ ಸೇರಿದಂತೆ ವಿವಿಧ ಭಾಗಗಳಲ್ಲಿ ಹೆಚ್ಚಿನ ಬಸ್ ವ್ಯವಸ್ಥೆ ಹಾಗೂ ಚನ್ನರಾಯಪಟ್ಟಣ ಬಸ್ ನಿಲ್ದಾಣದಲ್ಲಿ ನುಗ್ಗೇಹಳ್ಳಿ ಬಾಗೂರು ಶ್ರವಣಬೆಳಗೊಳ ನಿಲ್ದಾಣಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚಿನ ಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿದರು.
ತಾಲ್ಲೂಕು ಪಂಚಾಯಿತಿ ಸಹಾಯಕ ಕಾರ್ಯ ನಿರ್ವಹಣಾಧಿಕಾರಿ ಗಿರೀಶ್, ಸಿಡಿಪಿಒ ಇಂದ್ರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಎನ್.ಎಸ್. ಮಂಜುನಾಥ್, ಸಮಿತಿ ಸದಸ್ಯರಾದ ಎಂಎಸ್ ಜನಾರ್ಧನ್, ಎಆರ್ ನಾಗೇಶ್, ಮಿಲಿಟರಿ ಮಂಜು, ಕೆಎನ್ ನಾಗೇಶ್, ಎಚ್ ಆರ್ ಪ್ರಕಾಶ್, ನಿಶ್ಚಲ್, ಗಣೇಶ್, ಬಿ. ಆರ್ ಕೆಂಪೇಗೌಡ, ರಂಗಸ್ವಾಮಿ ಎಚ್ ಕೆ, ರಂಗಸ್ವಾಮಿ, ಗ್ರಾ.ಪಂ. ಸದಸ್ಯರಾದ ನಟರಾಜ್ ಯಾದವ್, ರಮ್ಯಾ ಲೋಕೇಶ್, ಗೌಡಕಿ ಮಂಜು, ಕಾರ್ಯದರ್ಶಿ ರಾಜಕುಮಾರ್, ಬಿಲ್ ಕಲೆಕ್ಟರ್ ನಾಗರಾಜು, ಸೋಮು, ಸೇರಿದಂತೆ 5 ಇಲಾಖೆಗಳ ಅಧಿಕಾರಿಗಳು, ಫಲಾನುಭವಿಗಳು ಹಾಜರಿದ್ದರು.
ರಾಜ್ಯ ಕಾಂಗ್ರೆಸ್ ಸರ್ಕಾರದ ಬಡವರ ಪರವಾದ 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಚನ್ನರಾಯಪಟ್ಟಣ ತಾಲ್ಲೂಕು ಜಿಲ್ಲೆಯಲ್ಲೇ ಎರಡನೇ ಸ್ಥಾನ ಪಡೆದಿದೆ. ಶೇ 98.75ರಷ್ಟು ಯೋಜನೆಯನ್ನು ಅನುಷ್ಠಾನಕ್ಕೆ ತರಲಾಗಿದೆಎಲ್.ಪಿ.ಪ್ರಕಾಶ್ ಗೌಡ ಗ್ಯಾರಂಟಿ ಯೋಜನೆ ತಾಲ್ಲೂಕು ಸಮಿತಿ ಅಧ್ಯಕ್ಷ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.