ADVERTISEMENT

ಬೇಲೂರು: ಯಗಚಿ ಜಲಾಶಯ ಭರ್ತಿ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 3:44 IST
Last Updated 16 ಜುಲೈ 2021, 3:44 IST
ಬೇಲೂರಿನ ಯಗಚಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ನದಿಗೆ ನೀರು ಬಿಡಲಾಯಿತು       
ಬೇಲೂರಿನ ಯಗಚಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ನದಿಗೆ ನೀರು ಬಿಡಲಾಯಿತು          

ಬೇಲೂರು: ತಾಲ್ಲೂಕಿನ ಯಗಚಿ ಜಲಾಶಯ ಭರ್ತಿಯಾದ ಹಿನ್ನೆಲೆಯಲ್ಲಿ ಐದು ಕ್ರಸ್ಟ್‌ ಗೇಟ್ ಮೂಲಕ ನದಿಗೆ1,200 ಕ್ಯುಸೆಕ್‌ ನೀರನ್ನು ಬಿಡಲಾಯಿತು.

ಚಿಕ್ಕಮಗಳೂರು, ಮೂಡಿಗೆರೆ ಹಾಗೂ ತಾಲ್ಲೂಕಿನ ಮಲೆನಾಡು ಭಾಗದಲ್ಲಿ‌ ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ಯಗಚಿ ಜಲಾಶಯ ಭರ್ತಿಯಾಗಿದ್ದು, ಬುಧವಾರ ರಾತ್ರಿಯಿಂದ ನದಿಗೆ ನೀರು ಬಿಡಲಾಯಿತು. ನೀರಿನ ಹರಿವು ನೋಡಲು ಮಳೆಯನ್ನು ಲೆಕ್ಕಿಸದೆ ಪ್ರವಾಸಿಗರ ದಂಡು ಹರಿದು ಬರುತ್ತಿದೆ.

‘3.3 ಟಿಎಂಸಿ ಸಾಮರ್ಥ್ಯದ ಯಗಚಿ ಜಲಾಶಯಕ್ಕೆ 1,200 ಕ್ಯೂಸೆಕ್‌ ಒಳ ಹರಿವಿದ್ದು, 1,200 ಕ್ಯುಸೆಕ್‌ ನೀರನ್ನು ನದಿಗೆ ಬಿಡಲಾಗುತ್ತಿದೆ. ಒಳ ಹರಿವಿನ ಪ್ರಮಾಣ ಹೆಚ್ಚಾದರೆ ಹೆಚ್ಚಿನ ನೀರನ್ನು ನದಿಗೆ ಬಿಡಲಾಗುವುದು’ ಎಂದು ಯಗಚಿ ಯೋಜನಾ ವಿಭಾಗದ ಸಹಾಯಕ ಎಂಜಿನಿಯರ್ ಶಿವಕುಮಾರ್ ಪತ್ರಿಕೆಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.