ADVERTISEMENT

ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ: ಸಂಸದ ಪ್ರಜ್ವಲ್‌

‘ಸಮ್ಮಿಶ್ರ ಸರ್ಕಾರಕ್ಕೆ ಧಕ್ಕೆ ಇಲ್ಲ’

​ಪ್ರಜಾವಾಣಿ ವಾರ್ತೆ
Published 6 ಜೂನ್ 2019, 14:14 IST
Last Updated 6 ಜೂನ್ 2019, 14:14 IST
ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ   

ಹಾಸನ: ರಾಜ್ಯ ಸಮ್ಮಿಶ್ರ ಸರ್ಕಾರ ಯಾವುದೇ ಧಕ್ಕೆ ಇಲ್ಲ. ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಇನ್ನೂ ಉತ್ತಮ ಯೋಜನೆ ನೀಡಲಿದ್ದಾರೆ ಎಂದು ಪ್ರಜ್ವಲ್‌ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸರ್ಕಾರ ಯಾವುದೇ ಕಾರಣಕ್ಕೂ ಬೀಳುವುದಿಲ್ಲ, ಬಿಜೆಪಿ ನಾಯಕರು ಡೆಡ್‌ಲೈನ್ ಕೊಡತ್ತಲೇ ಇದ್ದಾರೆ. ಇದು ಐದನೇ ಡೆಡ್ ಲೈನ್ ಆಗಿದೆ. ಯಾವ ಶಾಸಕರೂ ಬಿಜೆಪಿಗೆ ಹೋಗುವುದಿಲ್ಲ. ಬಿಜೆಪಿ ನಾಯಕರು ರಾಜಕೀಯ ವ್ಯವಸ್ಥೆ ಹಾಳು ಮಾಡಲು ಹೊರಟಿರುವುದು ಸರಿಯಲ್ಲ. ಒಳ್ಳೆಯ ಕೆಲಸ ಮಾಡಲು ಬೆಂಬಲ ಕೊಡಬೇಕು. ಮುಕ್ತವಾಗಿ ಸರ್ಕಾರ ನಡೆಸಲು ಅವಕಾಶ ನೀಡಬೇಕು’ ಎಂದು ತಿಳಿಸಿದರು.

ಮುಖ್ಯಮಂತ್ರಿ ಗ್ರಾಮವಾಸ್ತವ್ಯ ಮಾಡಲು ನಿರ್ಧರಿಸಿರುವುದು ಒಳ್ಳೆಯ ಬೆಳವಣಿಗೆ. ಹಿಂದಿನಿಂದಲೂ ಗ್ರಾಮ ವಾಸ್ತವ್ಯ ಮಾಡಿಕೊಂಡು ಬಂದಿದ್ದಾರೆ. ಇದರಿಂದ ಜನರು ಅನುಭವಿಸುತ್ತಿರುವ ತಳಮಟ್ಟದ ಸಮಸ್ಯೆ ಗಮನಕ್ಕೆ ಬಂದು, ಮತ್ತಷ್ಟು ಒಳ್ಳೆಯ ಕೆಲಸ ಮಾಡಲು ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

ADVERTISEMENT

ವಿಧಾನಸಭೆಗೆ ಮಧ್ಯಂತರ ಚುನಾವಣೆ ಬಗ್ಗೆ ಸಿ.ಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಹೇಳಿಕೆ ವಿಚಾರದ ಪ್ರಶ್ನೆಗೆ, ಈ ಬಗ್ಗೆ ನನಗೇನೂ ಗೊತ್ತಿಲ್ಲ. ಅವರನ್ನೇ ಕೇಳಿ’ ಎಂದ ಪ್ರಜ್ವಲ್, ಕುಮಾರಸ್ವಾಮಿ ಜಿಲ್ಲೆಯಲ್ಲಿ ಗ್ರಾಮವಾಸ್ತವ್ಯ ಮಾಡುವ ಬಗ್ಗೆ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.