ಬೇಲೂರು: ‘ದಕ್ಷಿಣ ಭಾರತದಲ್ಲಿ ಬಿಜೆಪಿಯನ್ನು ಪ್ರಥಮ ಬಾರಿಗೆ ಅಧಿಕಾರಕ್ಕೆ ತಂದ ಕೀರ್ತಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ’ ಎಂದು ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸಂಜಯ್ ಕೌರಿ ಹೇಳಿದರು.
ಶಾಸಕ ಎಚ್.ಕೆ.ಸುರೇಶ್ ನಿವಾಸದಲ್ಲಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರ 82ನೇ ಜನ್ಮದಿನದ ಅಂಗವಾಗಿ ಪಕ್ಷದ ತಾಲ್ಲೂಕು ಘಟಕದಿಂದ ಗುರುವಾರ ಆಯೋಜಿಸಿದ್ದ, ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು.
ನಗರ ಘಟಕದ ಅಧ್ಯಕ್ಷ ವಿನಯ್ ಮಾತನಾಡಿ, ‘ಯಡಿಯೂರಪ್ಪ ಅವರು ಬಿಜೆಪಿಯನ್ನು ತಳಮಟ್ಟದಿಂದ ಕಟ್ಟಿ, ಸಾಕಷ್ಟು ನಾಯಕರನ್ನು ಬೆಳೆಸಿದರು’ ಎಂದರು.
ಸಂಜೀವಿನಿ ರಕ್ತನಿಧಿಯ ಮುಖ್ಯಸ್ಥ ರವಿಕುಮಾರ್, ಬಿಜೆಪಿ ಮುಖಂಡ ಕೋಟೆ ಶ್ರೀನಿವಾಸ್ ಮಾತನಾಡಿದರು. ಮುಖಂಡರಾದ ಜಾವಗಲ್ ರಮೇಶ್, ಪ್ರೇಮಾ, ಗಗನ್, ಪ್ರಣೀತ್ ಹಾಗೂ ಮುಖಂಡರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.