ADVERTISEMENT

ಸಿಡಿಲು ಬಡಿದು ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 25 ಏಪ್ರಿಲ್ 2021, 4:56 IST
Last Updated 25 ಏಪ್ರಿಲ್ 2021, 4:56 IST

ಚನ್ನರಾಯಪಟ್ಟಣ: ಸಿಡಿಲು ಬಡಿದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಹೊರವಲಯಲ್ಲಿರುವ ಹೌಸಿಂಗ್ ಬೋರ್ಡ್ ಬಡಾವಣೆಯ ಉದಯ್ (18) ಮೃತ ಯುವಕ. ಮನೆಯ ಸಮೀಪ ಇದ್ದ ಮೈದಾನದಲ್ಲಿ ಸ್ನೇಹಿತರೊಂದಿಗೆ ಶುಕ್ರವಾರ ಸಂಜೆ ಕ್ರಿಕೆಟ್ ಆಡುತ್ತಿದ್ದಾಗ ತುಂತುರು ಮಳೆ ಬರುತ್ತಿತ್ತು. ಆ ಸಮಯದಲ್ಲಿ ಈತನಿಗೆ ಸಿಡಿಲು ಬಡಿದಿದೆ.

ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.