
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಹಾಸನ: ನಗರದ ಚನ್ನಪಟ್ಟಣ ಪ್ರದೇಶದಲ್ಲಿ ಯುವಕ ಶ್ರೀನಿಧಿ (22) ಐದು ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶ್ರೀನಿಧಿ ಚನ್ನಪಟ್ಟಣ ನಿವಾಸಿಯಾಗಿದ್ದು, ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದ. ಮಂಗಳವಾರ ಸ್ನೇಹಿತನ ಬಳಿ ಪುಸ್ತಕ ಪಡೆದುಕೊಂಡು ಬರುವುದಾಗಿ ತಾಯಿಗೆ ತಿಳಿಸಿ ಮನೆಯಿಂದ ಹೊರಟಿದ್ದ. ನಂತರ ಚನ್ನಪಟ್ಟಣದಲ್ಲಿರುವ ಜಿಲ್ಲಾ ನ್ಯಾಯಾಲಯದ ಪಕ್ಕದ ಐದು ಅಂತಸ್ತಿನ ಕಟ್ಟಡಕ್ಕೆ ಹತ್ತಿ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಹಾಸನ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.