ಬೇಲೂರು: ಆನ್‌ಲೈನ್ ಗೇಮ್‌ನಿಂದ ಹಣ ಕಳೆದುಕೊಂಡು ಮನನೊಂದು ಯುವಕ ಇಲ್ಲಿನ ಪುಷ್ಪಗಿರಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲ್ಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ (23) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಟಾಟಾ ಕ್ಯಾಪಿಟಲ್ ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂಬಮಾಹಿತಿ ಇದೆ. ಹಲವಾರು ತಿಂಗಳಿಂದ ಆನ್‌ಲೈನ್ ಗೇಮ್‌ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದರು.
ಶನಿವಾರ ಚೋಕನಹಳ್ಳಿಯಿಂದ ಇಲ್ಲಿನ ಪುಷ್ಪಗಿರಿ ಲಾಡ್ಜ್‌ಗೆ ಬಂದಿದ್ದ ರಾಕೇಶ್‌ಗೌಡ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಡೆತ್ ನೋಟ್‌ನಲ್ಲಿ ಅವರ ತಾಯಿಗೆ ಕ್ಷಮೆ ಕೇಳಿದ್ದು, ‘ಆನ್‌ಲೈನ್ ಗೇಮ್ ನಿಷೇಧಿಸಬೇಕು. ಯಾರೂ ಈ ಗೇಮ್ ಆಡಬೇಡಿ. ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್ ನನ್ನ ಅಂತಿಮ ದರ್ಶನಕ್ಕೆ ಬರಬೇಕು’ ಎಂದು ಬರೆದಿಟ್ಟಿದ್ದಾರೆ.
ಶನಿವಾರ ಸಂಜೆಯಾದರೂ ಯುವಕ ಕೊಠಡಿಯಿಂದ ಯುವಕ ಹೊರಬರದೆ ಇದ್ದುದರಿಂದ ಲಾಡ್ಜ್‌ನವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ಸ್ಥಳೀಯರು ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಬೇಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.