ADVERTISEMENT

ಉತ್ತಮ ಕ್ರೀಡಾಪಟುಗಳಾಗಿ

​ಪ್ರಜಾವಾಣಿ ವಾರ್ತೆ
Published 25 ಆಗಸ್ಟ್ 2011, 5:30 IST
Last Updated 25 ಆಗಸ್ಟ್ 2011, 5:30 IST
ಉತ್ತಮ ಕ್ರೀಡಾಪಟುಗಳಾಗಿ
ಉತ್ತಮ ಕ್ರೀಡಾಪಟುಗಳಾಗಿ   

ಹಾವೇರಿ: `ಉತ್ತಮ ಆರೋಗ್ಯ ವೃದ್ಧಿಗೆ ಕ್ರೀಡಾ ಮನೋಭಾವ ಪೂರಕ ವಾಗಿದ್ದು, ವಿದ್ಯಾರ್ಥಿಗಳು ಶಾಲಾ ಮಟ್ಟದಲ್ಲಿಯೇ ಕ್ರೀಡೆಯ ಬಗ್ಗೆ ಹೆಚ್ಚಿನ ಗಮನ ನೀಡುವ ಮೂಲಕ ಉತ್ತಮ ಕ್ರೀಡಾಪಟುಗಳಾಗಿ ಹೊರ ಹೊಮ್ಮ ಬೇಕು~ ಎಂದು ಶಾಸಕ ನೆಹರೂ      ಓಲೇಕಾರ ಅವರು ಹೇಳಿದರು.

ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬುಧವಾರ ನಡೆದ 2011-12 ನೇ ಸಾಲಿನ ತಾಲ್ಲೂಕು ಮಟ್ಟದ ಪ್ರೌಢ ಶಾಲೆಗಳ ಇಲಾಖಾ ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗ ವಹಿಸುವಾಗ ಸ್ಪರ್ಧಾ ಮನೋಭಾವ ಪ್ರಮುಖವಾಗಿರುತ್ತದೆ. ಉತ್ತಮ ವಾದ ತರಬೇತಿ ಮತ್ತು ಕಠಿಣ ಪರಿ ಶ್ರಮದ ಮೂಲಕ ಯಶಸ್ಸು ಪಡೆಯ ಬಹುದಾಗಿದೆ ಎಂದರು.
ಕ್ಲಸ್ಟರ್ ಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳು ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಇನ್ನೂ ಉತ್ತಮ ಪ್ರದರ್ಶನ ನೀಡಿ ವಿಜೇತರಾಗುವಂತೆ ವಿದ್ಯಾರ್ಥಿಗಳಿಗೆ ಹಾರೈಸಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಚನ್ನಬಸಪ್ಪ ಅರಳಿ ಕ್ರೀಡಾಜ್ಯೋತಿ ಬೆಳಗುವುದರ ಮೂಲಕ ಕ್ರೀಡಾಕೂಟ ವನ್ನು ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷ ಜಗದೀಶ ಮಲಗೋಡ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನಗರಾಭಿ ವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಿರೀಶ ತುಪ್ಪದ, ಪ್ರಭಾರ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಚ್.ಬಿ. ನಾಯಕ, ಮುನ್ಸಿಪಲ್ ಹೈಸ್ಕೂಲ ಮುಖ್ಯೋಪಾ ಧ್ಯಾಯ ಜಿ.ಎನ್. ಕರಬಸನಗೌಡ, ತಾಲ್ಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಎಚ್.ಹೊಟ್ಟೆಗೌಡರ, ಮಾಜಿ ಸೈನಿಕ ಕೆ.ಸಿ. ಕೋರಿ ಹಾಗೂ ದೈಹಿಕ ಶಿಕ್ಷಕ ಎಂ.ಎಸ್.ಮರಿಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ರಾಮಶೆಟ್ಟಿ ಸೇರಿದಂತೆ ತಾಲ್ಲೂಕಿನ ಎಲ್ಲ ದೈಹಿಕ ಶಿಕ್ಷಕರು ಮತ್ತು ಕ್ರೀಡಾಪಟುಗಳು ಹಾಜರಿದ್ದರು. ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿ ನಾಗರಾಜ ಇಚ್ಚಂಗಿ ಸ್ವಾಗತಿಸಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.