ADVERTISEMENT

ಏತ ನೀರಾವರಿ ಆರಂಭಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 4 ಏಪ್ರಿಲ್ 2013, 6:57 IST
Last Updated 4 ಏಪ್ರಿಲ್ 2013, 6:57 IST

ಹಿರೇಕೆರೂರ: ಸ್ಥಗಿತಗೊಂಡಿರುವ ರಟ್ಟೀಹಳ್ಳಿ ಏತ ನೀರಾವರಿ ಯೋಜನೆಯ ಒಂದನೇ ಹಂತ ಹಾಗೂ ಎರಡನೇ ಹಂತಗಳನ್ನು ಪುನಃ ಆರಂಭಿಸಿ ರೈತರಿಗೆ ನೀರು ಒದಗಿಸುವ ಮೂಲಕ ಅನುಕೂಲ ಮಾಡಿಕೊಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಪ್ರೊ.ನಂಜುಂಡಸ್ವಾಮಿ ಬಣ) ಕಾರ್ಯಕರ್ತರು ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ನೇತೃತ್ವ ವಹಿಸಿದ್ದ ಸಂಘಟನೆಯ ಅಧ್ಯಕ್ಷ ರಾಜಶೇಖರ ದೂದೀಹಳ್ಳಿ ಮಾತನಾಡಿ, `ಎಸ್.ಬಂಗಾರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಈ ಯೋಜನೆಗೆ ಮಂಜೂರಾತಿ ನೀಡಲಾಗಿದ್ದು, 1ನೇ ಹಂತದ ಕಾಮಗಾರಿ ಪೂರ್ಣಗೊಂಡು ಎಲಿವಾಳ, ರಟ್ಟೀಹಳ್ಳಿ ಹಾಗೂ ಕವಳಿಕುಪ್ಪಿ ಗ್ರಾಮಗಳಿಗೆ ನೀರು ಒದಗಿಸಲಾಗಿತ್ತು. ಕೆಲ ವರ್ಷಗಳ ನಂತರ ಸಣ್ಣ ನೀರಾವರಿ ಇಲಾಖೆಯವರು ವಿದ್ಯುತ್ ಬಿಲ್ ಪಾವತಿಸದೇ ಇರುವುದರಿಂದ ರೈತರಿಗೆ ನೀರು ಪೂರೈಕೆ ಸ್ಥಗಿತವಾಗಿ ಸಂಪೂರ್ಣ ಯೋಜನೆ ಸ್ಥಗಿತಗೊಂಡಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

`2ನೇ ಹಂತದ ಯೋಜನೆ ಕೂಡ ಅಧಿಕಾರಗಳ ನಿರ್ಲಕ್ಷ್ಯದಿಂದ ನೆನೆಗುದಿಗೆ ಬಿದ್ದಿದ್ದು, ಎರಡೂ ಹಂತಗಳ 1,610 ಹೆಕ್ಟೇರ್ ಜಮೀನಿಗೆ ನೀರಾವರಿ ಸೌಲಭ್ಯ ಒದಗಿಸುವ ಯೋಜನೆ ಸಂಪೂರ್ಣವಾಗಿ ಸ್ಥಗಿತಗೊಂಡು ಸರ್ಕಾರದ ಲಕ್ಷಾಂತರ ರೂಪಾಯಿ ಹಣ ಪೋಲು ಮಾಡಲಾಗಿದೆ. ಈ ಯೋಜನೆಗೆ ಒದಗಿಸಿದ್ದ ಮಷಿನ್‌ಗಳು, ಸಲಕರಣೆಗಳು ದಶಕಗಳಿಂದ ಜಂಗು ತಿಂದು ಹಾಳಾಗುತ್ತಿವೆ. ಕಾರಣ ಈ ಎರಡೂ ಹಂತಗಳ ಯೋಜನೆಯನ್ನು ಪುನರಾರಂಭಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು' ಎಂದು ಒತ್ತಾಯಿಸಿದರು.

ಮುಖಂಡರಾದ ಮಲ್ಲನಗೌಡ ಸೊರಟೂರ, ಉಮೇಶ ಹೊಸಮನಿ, ವೀರಬಸಯ್ಯ ಬಣಕಾರ, ಸುರೇಶ ಹುಲ್ಲತ್ತಿ, ರಹೀಮ್‌ಸಾಬ್ ಹಾವೇರಿ, ಮಲ್ಲೇಶ ಪೂಜಾರ, ರಮೇಶ ದ್ಯಾವಕ್ಕಳವರ, ಚನ್ನಪ್ಪ ಲಮಾಣಿ, ಮುಕ್ತಾರ್‌ಸಾಬ್ ಕೋಡಿಹಳ್ಳಿ ಮೊದಲಾದವರು ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.