ADVERTISEMENT

ಕನ್ನಡಿಗರಿಗೆ ಮೀಸಲಾತಿ: ಕರವೇ ಪ್ರತಿಭಟನೆ ಡಿ.23ಕ್ಕೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2017, 9:31 IST
Last Updated 19 ಡಿಸೆಂಬರ್ 2017, 9:31 IST

ಹಾವೇರಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಡಿ.23ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕರಿಬಸಯ್ಯ ಬಸರಿಹಳ್ಳಿಮಠ, ‘ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಬಸವನಗುಡಿ ನ್ಯಾಶನಲ್‌ ಕಾಲೇಜು ಮೈದಾನದಿಂದ ವಿಧಾನಸೌಧದ ವರೆಗೆ ಜಾಥಾ ನಡೆಯಲಿದೆ. ಒಟ್ಟು 8 ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುವುದು, ಸುಮಾರು 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ಜಿಲ್ಲೆಯಿಂದ ಸುಮಾರು 600 ಜನ ಮುಖಂಡರು ಪಾಲ್ಗೊಳ್ಳುತ್ತೇವೆ ಎಂದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸತೀಶಗೌಡ ಮುದಿಗೌಡ್ರ, ಉಪಾಧ್ಯಕ್ಷ ನಂದೀಶ ಗೊಡ್ಡೆಮ್ಮಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ವಿಜಯಲಕ್ಷ್ಮಿ ಗೊಡ್ಡೆಮ್ಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯಶವಂತಗೌಡ ದೊಡ್ಡಗೌಡ್ರ, ಜಿಲ್ಲಾ ಸಹ ಕಾರ್ಯದರ್ಶಿ ಬಸವರಾಜ ಹೊಂಬರಡಿ, ನಾಗಯ್ಯ ಹಿರೇಮಠ, ಕೊಟ್ರೇಶ ಜಿ.ಎಸ್., ಗಿರೀಶ ಬಾರ್ಕಿ, ಸಂತೋಷ ಪಾಟೀಲ, ಪರಶುರಾಮ ಈಳಿಗೇರ, ಕರಿಯಪ್ಪ ಕೊರವರ, ಸಂತೋಷ ಗಾಣಿಗೇರ, ಶಿವಯೋಗಿ ಹೂಗಾರ ಹಾಗೂ ಲಕ್ಷ್ಮಣ ತುಮರಿಕೊಪ್ಪ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.