ADVERTISEMENT

ಕಾಂಗ್ರೆಸ್ ಅಭ್ಯರ್ಥಿ ಡಿ.ಆರ್.ಪಾಟೀಲ ಮತಯಾಚನೆ

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2019, 15:31 IST
Last Updated 7 ಏಪ್ರಿಲ್ 2019, 15:31 IST
 ಹಾವೇರಿ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಆರ್.ಪಾಟೀಲ ಅವರು  ಬೆಳಧಡಿ ತಾಂಡೆ ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ ಮತಯಾಚನೆ ಮಾಡಿದರು.
 ಹಾವೇರಿ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಆರ್.ಪಾಟೀಲ ಅವರು  ಬೆಳಧಡಿ ತಾಂಡೆ ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ ಮತಯಾಚನೆ ಮಾಡಿದರು.   

ಮುಳಗುಂದ: ಹಾವೇರಿ ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಆರ್.ಪಾಟೀಲ ಅವರು ಸಮೀಪದ ಮಹಾಲಿಂಗಪೂರ, ಸೊರಟೂರ, ಯಲಿಶಿರೂರ, ಬೆಳಧಡಿ, ಬೆಳಧಡಿ ತಾಂಡೆ ಸೇರಿದಂತೆ ಹಲವು ಗ್ರಾಮಗಳಿಗೆ ತೆರಳಿ ಮತಯಾಚನೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಿಳಾ ಮೀಸಲಾತಿ ಜಾರಿಗೆ ತರದ ಕೇಂದ್ರ ಬಿಜೆಪಿ ಸರ್ಕಾರ ಸಾಮಾಜಿಕ ನ್ಯಾಯ ವಿರೋಧಿಯಾಗಿದೆ. ಈ ಹಿಂದೆ ಯುಪಿಎ ಹಾಗೂ ರಾಜ್ಯ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶ್ರಮಿಕರ, ಬಡವರ ಅಭಿವೃದ್ದಿಗೆ ನರೇಗಾ ಯೋಜನೆ ಸೇರಿದಂತೆ ಹಲವು ಜನಪರ ಯೋಜನೆಗಳ ಜಾರಿ ತಂದಿದೆ. ಮಹಿಳಾ ಮೀಸಲಾತಿ ಸೇರಿದಂತೆ ಸಾಮಾಜಿಕ ನ್ಯಾಯದ ಸಾಕಷ್ಟು ಕಾರ್ಯ ಕ್ರಮಗಳನ್ನು ಕಾಂಗ್ರೆಸ್‌ ದೇಶಕ್ಕೆ ನೀಡಿದೆ. ಇವುಗಳನ್ನೆಲ್ಲ ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಎಂದು ಮನವಿ ಮಾಡಿದರು.

ಜಿಲ್ಲಾ ಪಂಚಾಯ್ತಿ ಸದಸ್ಯ ವಾಸಪ್ಪ ಕುರಡಗಿ, ಮುಳಗುಂದ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸವರಾಜ ಸುಂಕಾಪೂರ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.