ADVERTISEMENT

ಜಾನಪದ ವಿವಿ ಗ್ರಾಮ ಚರಿತ್ರೆ ಕೋಶ ಸಮೀಕ್ಷಾ ಕಾರ್ಯ

​ಪ್ರಜಾವಾಣಿ ವಾರ್ತೆ
Published 5 ಜುಲೈ 2012, 6:20 IST
Last Updated 5 ಜುಲೈ 2012, 6:20 IST

ಹಾವೇರಿ: `ಕರ್ನಾಟಕ ಜಾನಪದ ವಿಶ್ವ ವಿದ್ಯಾಲಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆಯುತ್ತಿರುವ `ಗ್ರಾಮ ಚರಿತ್ರೆ ಕೋಶ~ ಸಮೀಕ್ಷಾ ಕಾರ್ಯ ಯೋಜನೆಯನ್ನು ಶೀಘ್ರದಲ್ಲಿ ಯೇ ರಾಜ್ಯದ ಇನ್ನಿತರ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು~ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಕಾರ್ಯದರ್ಶಿ ಬಸವರಾಜ ಹೇಳಿದರು.

ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿ ಯ ಕರ್ನಾಟಕ ಜಾನಪದ ವಿಶ್ವವಿದ್ಯಾಲ ಯಕ್ಕೆ ಬುಧವಾರ ಭೇಟಿ ನೀಡಿದ ನಂತರ ಹಾವೇರಿ ನಗರಕ್ಕೆ ಆಗಮಿಸಿದ  ಅವರು ಸುದ್ದಿಗಾರ ರೊಂದಿಗೆ ಮಾತನಾಡಿದರು.

ಹಾವೇರಿ ಜಿಲ್ಲೆಯಲ್ಲಿ ಪ್ರಾಯೋಗಿಕ ವಾಗಿ ಆರಂಭಿಸಲಾದ ಗ್ರಾಮ ಚರಿತ್ರ ಕೋಶದ ಯೋಜನೆ ಮುಕ್ತಾಯದ ಹಂತದಲ್ಲಿದ್ದು, ಬೇರೆ ಜಿಲ್ಲೆಗಳಿಗೆ ವಿಸ್ತರಿಸುವಂತೆ ವಿಶ್ವವಿದ್ಯಾಲಯದ ಕುಲಪತಿಗಳು ಕೇಳಿಕೊಂಡ ಹಿನ್ನಲೆಯಲ್ಲಿ ಆ ಯೋಜನೆಯನ್ನು ಆದಷ್ಟು ಬೇಗ ಬೇರೆ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದರು.

ಗ್ರಾಮ ಚರಿತ್ರೆ ಕೋಶ ಯೋಜನೆ ವಿಸ್ತರಿಸುವುದರ ಜತೆಗೆ ಇನ್ನೂ ಎರಡು ಹೊಸ ಯೋಜನೆ ಆರಂಭಿಸುವ ಬಗ್ಗೆ ವಿಶ್ವವಿದ್ಯಾಲಯ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದೆ. ಅದರಲ್ಲಿ 15 ಲಕ್ಷ ರೂ. ಅನುದಾನದ ಗ್ರಾಮಗಳ ಸಮೀಕ್ಷೆ ಮಾಡುವ ಯೋಜನೆ ಹಾಗೂ 20 ಲಕ್ಷ ರೂ. ಅನುದಾನದ ಇನ್ನೊಂದು ಯೋಜನೆ ಸೇರಿವೆ. ಈ ಎರಡೂ ಯೋಜನೆಗಳಿಗೆ ಪ್ರಸಕ್ತ ವರ್ಷದಲ್ಲಿಯೇ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

ಜಾನಪದ ವಿಶ್ವವಿದ್ಯಾಲಯದ ಉನ್ನತ ಶಿಕ್ಷಣ ಇಲಾಖೆಗೆ ಸೇರಿದ್ದರೂ ಕೂಡಾ ಜಾನಪದ ಕಲೆ, ಸಂಸ್ಕೃತಿಗೆ ಸಂಬಂಧಿಸಿದ್ದಾಗಿದೆ. ಹೀಗಾಗಿ ವಿವಿ ಇಲಾಖೆಗೆ ಸಂಬಂಧಿಸಿದ ಯಾವುದೇ ಯೋಜನೆಗಳನ್ನು ಕೈಗೆತ್ತಿಕೊಂಡರೂ ಅದಕ್ಕೆ ಅಗತ್ಯ ಹಣಕಾಸು ನೆರವು ನೀಡಲು ಇಲಾಖೆ ಸಿದ್ಧವಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗಾಂಧಿ ಚಿತಾಭಸ್ಮ ಸ್ಮಾರಕ: ಹಾವೇರಿ ತಾಲ್ಲೂಕಿನ ಕರ್ಜಗಿ ಗ್ರಾಮದಲ್ಲಿರುವ ಗಾಂಧಿ ಚಿತಾಭಸ್ಮ ಕಟ್ಟೆಯನ್ನು ಸ್ಮಾರಕವನ್ನಾಗಿ ನಿರ್ಮಿಸುವ ಪ್ರಸ್ತಾವನೆ ಇಲಾಖೆ ಮುಂದಿದ್ದು, ಈ ವರ್ಷ ಅದಕ್ಕೆ ಅವಶ್ಯವಿರುವ ಅನುದಾನವನ್ನು ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು.

ಕಳೆದ ವರ್ಷದ ಕೊನೆಗೆ ಈ ಸ್ಮಾರಕ ನಿರ್ಮಾಣದ ಪ್ರಸ್ತಾವನೆ ಇಲಾಖೆಗೆ ಬಂದಿದ್ದರಿಂದ ಅದಕ್ಕೆ ಹಣ ನೀಡಲು ಸಾಧ್ಯವಾಗಿರಲಿಲ್ಲ ಎಂದ ಅವರು, ಈ ವರ್ಷ ಅಗತ್ಯ ಹಣಕಾಸು ನೆರವು ನೀಡಲಾಗುತ್ತದೆ ಎಂದು ಹೇಳಿದರು.

ಪತ್ರಕರ್ತರಿಗೆ ಯಶಸ್ವಿನಿ: ಪತ್ರಕರ್ತರಿ ಗೆ ಯಶಸ್ವಿನಿ ಯೋಜನೆ ವಿಸ್ತರಿಸುವ ಸರ್ಕಾರದ ನಿರ್ಧಾರವನ್ನು ಈ ವರ್ಷ ಜಾರಿಗೊಳಿಸಲು ಚಿಂತನೆ ನಡೆದಿದೆ ಎಂದು ಬಸವರಾಜ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.