ADVERTISEMENT

ಡಿಸಿ ಕಚೇರಿ ಎದುರು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2011, 7:00 IST
Last Updated 3 ಫೆಬ್ರುವರಿ 2011, 7:00 IST

ಹಾವೇರಿ: ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ ಶುಶ್ರೂಷಕರ, ಶುಶ್ರೂಷಕಿಯರ ಹುದ್ದೆಗಳನ್ನು ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಒತ್ತಾಯಿಸಿ ಸರ್ಕಾರಿ ಶುಶ್ರೂಷಕರ ಸಂಘದ ಹಾವೇರಿ ಜಿಲ್ಲಾ ಘಟಕ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಸಂಘದ ಜಿಲ್ಲಾಧ್ಯಕ್ಷ ಎಂ.ಎಚ್.ಮುಲ್ಲಾ ಹಾಗೂ ಪ್ರಧಾನ ಕಾರ್ಯದರ್ಶಿ ರವಿಕಾಂತ ಮಾಂಡ್ರೆ ನೇತೃತ್ವದಲ್ಲಿ ನಗರದ ಜಿಲ್ಲಾ ಆಸ್ಪತ್ರೆಯಿಂದ ಹೊರಟ ಬೃಹತ್ ಪ್ರತಿಭಟನಾ ಮೆರವಣಿಗೆಯು ನಗರದ ಪ್ರಮುಖ ರಸ್ತೆಯಲ್ಲಿ ಸಂಚರಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಖಾಲಿ ಹುದ್ದೆಗಳನ್ನು ಭರ್ತಿ ಮಾಡಬೇಕು.ಗುತ್ತಿಗೆ ಆಧಾರದ ಮೇಲೆ ಶುಶ್ರೂಷಕಿಯರ ನೇಮಕಾತಿ ರದ್ದು ಪಡಿಸಬೇಕು. ವಸತಿ ಗೃಹ ಮೀಸಲಿಡಬೇಕು ಹಾಗೂ ಆಸ್ಪತ್ರೆಗಳಲ್ಲಿ ಮೂಲ ಸೌಲಭ್ಯ ಒದಗಿಸಬೇಕು. ಸಮವಸ್ತ್ರ ಮತ್ತು ರಾತ್ರಿ ಪಾಳಿ ಭತ್ಯೆ ಹೆಚ್ಚಿಸಬೇಕು, ಶುಶ್ರೂಷಕರಿಗೆ ರಾಜ್ಯ ಪ್ರಶಸ್ತಿ ನೀಡಬೇಕು ಅಲ್ಲದೇ ತರಬೇತಿ ವಿದ್ಯಾರ್ಥಿಗಳಿಗೆ ಸ್ಟೈಫಂಡ್ ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.ರವಿಕಾಂತ ಮಾಂಡ್ರೆ, ಉಮಾದೇವಿ ದೊಡ್ಡಮನಿ, ರಾಜೇಶ್ವರಿ ಭಟ್, ರೇಣುಕಾ ಹೊಸಮನಿ ಸೇರಿದಂತೆ ಎರಡನೂರಕ್ಕೂ ಹೆಚ್ಚು ಶುಶ್ರೂಷಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.