ADVERTISEMENT

ತಹಶೀಲ್ದಾರ್ ದಾಳಿ 1906 ಸೀರೆಗಳ ವಶ

​ಪ್ರಜಾವಾಣಿ ವಾರ್ತೆ
Published 6 ಏಪ್ರಿಲ್ 2013, 19:59 IST
Last Updated 6 ಏಪ್ರಿಲ್ 2013, 19:59 IST

ರಾಣೆಬೆನ್ನೂರು (ಹಾವೇರಿ ಜಿಲ್ಲೆ): ತಹಶೀಲ್ದಾರ್ ಶಿವಕುಮಾರ ಕವಲೆತ್ತು ಗ್ರಾಮದಲ್ಲಿನ ಮನೆಯೊಂದರ ಮೇಲೆ ಶನಿವಾರ ದಾಳಿ ನಡೆಸಿ, ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ ಸೀರೆಗಳನ್ನು  ವಶಪಡಿಸಿಕೊಂಡಿದ್ದಾರೆ.

ಕವಲೆತ್ತು ಗ್ರಾಮದ ಗ್ರಾಮ ಪಂಚಾಯಿತಿ ಅಧ್ಯಕ್ಷ ರೇವಣೆಪ್ಪ ಕೋಡೇರ ಎಂಬುವವರ ಮನೆಯಲ್ಲಿ ಈ ಸೀರೆಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಬಿಬಿಎಂಪಿ (ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಮಾಜಿ ಉಪ ಮೇಯರ್ ಆರ್. ಶಂಕರ ಹಾಗೂ ಕುಟುಂಬದವರ ಭಾವಚಿತ್ರ ಇರುವ 1906 ಸೀರೆಗಳನ್ನು ತಹಶೀಲ್ದಾರ್ ಮತ್ತು ಚುನಾವಣಾ ಸಿಬ್ಬಂದಿ ದಾಳಿ ನಡೆಸಿ ಪತ್ತೆ ಹಚ್ಚಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.