ಬ್ಯಾಡಗಿ: ‘ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಮೂರು ದಶಕಗಳಿಗೂ ಹೆಚ್ಚು ಕಾಲ ದುಡಿಯುತ್ತಿದ್ದೇನೆ. ಆದ್ದರಿಂದ, ಮುಂಬರುವ 2018ರ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಂದು ಘೋಷಿಸಬೇಕು’ ಎಂದು ಮುಖಂಡ ಎಸ್.ಆರ್.ಪಾಟೀಲ ಹೇಳಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು ಪಕ್ಷದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರದಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದೇನೆ. ಅಲ್ಲದೇ, ಈ ಹಿಂದೆ ಲೋಕಸಭೆ ಹಾಗೂ ವಿಧಾನ ಸಭೆಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಲು ಪ್ರಬಲ ಆಕ್ಷಾಂಕ್ಷಿಯಾಗಿದ್ದೆ.
ಆದರೆ, ಪಕ್ಷದ ವರಿಷ್ಠರು ಮುಂದಿನ ಚುನಾವಣೆಯಲ್ಲಿ ಅವಕಾಶ ನೀಡುವ ಭರವಸೆ ನೀಡಿದ್ದರಿಂದ ಸ್ಪರ್ಧೆಯಿಂದ ಹಿಂದೆ ಸರಿದಿದ್ದೆ. ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಂದು ಗುರುತಿಸಬೇಕು’ ಎಂದು ಅವರು ಒತ್ತಾಯಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.