ಬ್ಯಾಡಗಿ: ತಾಲ್ಲೂಕು ಕೇಂದ್ರಗಳಲ್ಲಿರುವ ಕೆಳಹಂತದ ನ್ಯಾಯಾಲಯಗಳನ್ನು ಉನ್ನತೀಕರಿಸುವುದರ ಜೊತೆಗೆ ಮೂಲ ಸೌಲಭ್ಯಗಳನ್ನು ಒದಗಿಸಲು ಸರ್ಕಾರ ಆಯವ್ಯಯದಲ್ಲಿ ಹೆಚ್ಚಿನ ಹಣವನ್ನು ಒದಗಿಸುವಂತೆ ರಾಜ್ಯ ಹೈಕೋರ್ಟ್ ಹಾಗೂ ಆಡಳಿತಾತ್ಮಕ ನ್ಯಾಯಾಧೀಶ ಜಾವೇದ್ ರಹೀಂ ಹೇಳಿದರು.
ಶನಿವಾರ ಇಲ್ಲಿಯ ನ್ಯಾಯಾಲಯ ಆವರಣದಲ್ಲಿ ರೂ.39 ಲಕ್ಷ ವೆಚ್ಚದ ಕೇಂದ್ರ ಅಭಿಲೇಖಾಲಯ ಹಾಗೂ 20 ಲಕ್ಷರೂ ವೆಚ್ಚದ ವಕೀಲರ ಭವನದ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿದರು. ಸದ್ಯ ಸರ್ಕಾರ ನೀಡುತ್ತಿರುವ ಅನುದಾನ ನ್ಯಾಯಾ ಲಯಗಳ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಕಾಗಲಾರದು, ಈ ಹಿನ್ನೆಲೆಯಲ್ಲಿ ಹೆಚ್ಚಿನ ಅನುದಾನ ಒದಗಿಸುವಂತೆ ಕಾನೂನು ಸಚಿವರಲ್ಲಿ ಮನವಿ ಮಾಡಿಕೊಂಡರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಉಚ್ಛ ನ್ಯಾಯಾಲಯದ ಇನೊಬ್ಬ ನ್ಯಾಯಾಧೀಶ ಅಶೋಕ ಹಿಂಚಿಗೇರಿ ಮಾತನಾಡಿ, ವ್ಯಕ್ತಿಯಾದವನು ಅವಕಾಶಕ್ಕಾಗಿ ಎದುರು ನೋಡದೆ ಇದ್ದ ಅವಕಾಶಗಳನ್ನು ಬಳಸಿಕೊಂಡಾಗ ಮಾತ್ರ ಉನ್ನತ ಸ್ಥಾನಕ್ಕೇರಲು ಸಾಧ್ಯ ವಿದೆ ಎಂದರು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಕಾನೂನು ಸಚಿವ ಎಸ್. ಸುರೇಶಕುಮಾರ, ರಾಜ್ಯದ ಎಲ್ಲಾ ನ್ಯಾಯಾಲಯಗಳಿಗೆ ಇ-ವಾಚನಾಲ ಯದ ಸೌಲಭ್ಯ ಕಲ್ಪಿಸಲಾಗಿದೆ. ನ್ಯಾಯಾ ಲಯಗಳಿಗೆ ಮೂಲ ಸೌಕರ್ಯಗಳನ್ನು ಕಲ್ಪಿಸುವ ಕಾರ್ಯ ಯೋಜನೆಗೆ ಸಂಪುಟ ಸಭೆಯಲ್ಲಿ ಗಂಭೀರವಾಗಿ ಚಿಂತನೆ ನಡೆಸಲಾಗುವುದೆಂಬ ಭರವಸೆ ನೀಡಿದರು.
ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಸಚಿವ ಸಿ.ಎಂ. ಉದಾಸಿ ಮಾತನಾಡಿದರು. ಅಧ್ಯಕ್ಷತೆ ಯನ್ನು ಹೈಕೋರ್ಟ್ ನ್ಯಾಯಾಧೀಶ ಮೋಹನ ಶಾಂತನಗೌಡ್ರ ವಹಿಸಿದ್ದರು.
ವೇದಿಕೆಯಲ್ಲಿ ಶಾಸಕ ಸುರೇಶಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಶಿವರಾಜ ಸಜ್ಜನರ, ರಾಜ್ಯ ವಕೀಲರ ಪರಿಷತ್ ಸದಸ್ಯ ಕೆ.ಶಿವಲಿಂಗಪ್ಪ, ಸ್ಥಳೀಯ ದಿವಾಣಿ ನ್ಯಾಯಾಲಯದ ನ್ಯಾಯಾಧೀಶ ಬಿ.ಜೆ.ಇ.ಪ್ರಮೋದ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಬಿ.ಎಸ್.ಚೂರಿ, ಕಾರ್ಯದರ್ಶಿ ಎನ್. ಎಂ.ಹುಬ್ಬಳ್ಳಿ ಉಪಸ್ಥಿತರಿದ್ದರು.
ಭಾರತಿ ಕುಲ್ಕರ್ಣಿ ಹಾಗೂ ಸಂಗಡಿ ಗರು ಪ್ರಾರ್ಥಿಸಿದರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಪಿ. ಸಂದೇಶ ಸ್ವಾಗತಿಸಿದರು. ವಕೀಲ ಎಂ.ಕೆ. ವೀರನಗೌಡ್ರ ಹಾಗೂ ಪಿ.ಸಿ.ಶೀಗಿಹಳ್ಳಿ ನಿರ್ವಹಿಸಿದರು.
ಸೋಮಣ್ಣಗೆ ಸನ್ಮಾನ ಇಂದು
ಹಿರೇಕೆರೂರ: ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿ ರುವ ಸೋಮಣ್ಣ ಬೇವಿನಮರದ ಅವರನ್ನು ಬಿಜೆಪಿ ತಾಲ್ಲೂಕು ಘಟಕ ದಿಂದ ಆ.6ರಂದು ಬೆಳಿಗ್ಗೆ 11ಕ್ಕೆ ಪಟ್ಟಣದ ಗುರುಭವನದಲ್ಲಿ ಸನ್ಮಾನಿಸ ಲಾಗುವುದು ಎಂದು ಅಧ್ಯಕ್ಷ ಫಾಲಾಕ್ಷ ಗೌಡ ಪಾಟೀಲ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.