ADVERTISEMENT

ಪುರಸಭೆಯಿಂದ ಮತದಾನ ಜಾಗೃತಿ ಜಾಥಾ

ಮಾರುಕಟ್ಟೆಗೆ ಭೇಟಿ ನೀಡಿದ ಶಿಲ್ಪಾ ನಾಗ್‌

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2018, 9:05 IST
Last Updated 21 ಏಪ್ರಿಲ್ 2018, 9:05 IST

ಸವಣೂರ : ಭಾರತದ ಪ್ರತಿಯೊಬ್ಬ ಪ್ರಜೆಗೆ ಮತದಾನ ಜನ್ಮಸಿದ್ಧಹಕ್ಕು. ಅದನ್ನು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ, ಹಕ್ಕನ್ನು ಮಾರಿಕೊಳ್ಳದೆ ಯೋಗ್ಯ ಅಭ್ಯರ್ಥಿಗೆ ಮತ ನೀಡಬೇಕು ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ನಾಗ ಹೇಳಿದರು.

ಪುರಸಭೆ ಕಾರ್ಯಾಲಯ, ತಾಲ್ಲೂಕು ಪಂಚಾಯ್ತಿ, ಸವಣೂರ ತಹಶೀಲ್ದಾರ್‌ ಕಾರ್ಯಾಲಯ ವತಿಯಿಂದ ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದ ಅವರು, ತಪ್ಪದೇ ಮತ ಚಲಾಯಿಸುವಂತೆ ವ್ಯಾಪಾರಿಗಳಲ್ಲಿ ಮನವಿ ಮಾಡಿಕೊಂಡರು.

‘ಭಾರತದ ಪ್ರಜೆಗಳಾದ ನಾವುಗಳು ಪ್ರತಿಯೊಂದು ಚುನಾವಣೆಯಲ್ಲಿ ನಿರ್ಭೀತರಾಗಿ ಯಾವುದೇ ಧರ್ಮ, ಜನಾಂಗ, ಜಾತಿ, ಮತ, ಭಾಷೆಯ ಪ್ರೇರಣೆ, ದಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುವಂತಾಗಬೇಕು’ ಎಂದರು.

ADVERTISEMENT

‘ನಿಮ್ಮ ಬಳಿ ಮತದಾರರ ಗುರುತಿನ ಚೀಟಿ ಇದೆಯಾ?’ ಎಂದು ಪ್ರಶ್ನಿಸುವ ಮೂಲಕ ಈ ಕಾರ್ಡ್‌ ಮತದಾನದ ವೇಳೆ ಅವಶ್ಯವಿದ್ದು ಅದನ್ನು ತಮ್ಮ ಬಳಿ ಇಟ್ಟುಕೊಂಡು ಮತದಾನಕ್ಕೆ ಹೋಗುವುದು ಅವಶ್ಯವಾಗಿದೆ. ಭಾರತೀಯ ಪ್ರತಿಯೊಬ್ಬ ಪ್ರಜೆಗೆ ಮತದಾನ ಜನ್ಮಸಿದ್ಧ ಹಕ್ಕು. ಅದನ್ನು ಯಾವುದೇ ಆಸೆ ಆಮಿಷಕ್ಕೆ ಒಳಗಾಗಿ ಮಾರಿಕೊಳ್ಳಬಾರದು’ ಎಂದು ಸಿಇಒ ಹೇಳಿದರು.

ತಾಲ್ಲೂಕು ದಂಡಾಧಿಕಾರಿ ವಸಂತಕುಮಾರ ಸಜ್ಜನ, ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಹಣಾ ಅಧಿಕಾರಿ ಎಂ.ಎಸ್. ಕುರ್ತಕೋಟಿ, ತಾಲ್ಲೂಕು ನೋಡಲ್‌ ಅಧಿಕಾರಿ ಎಸ್.ಎಂ. ಅಮರಾಪುರ, ಸಮಾಜ ಕಲ್ಯಾಣ ಸಹಾಯಕ ನಿರ್ದೇಶಕರಾದ ಸರಸ್ವತಿ ಗಜಕೋಶ, ಕ್ಷೇತ್ರ ಶಿಕ್ಷಣಾಧಿಕಾರಿ ಎನ್ ಎಸ್ ಸುದಾಕರ, ಜಿಲ್ಲಾ ಪಂಚಾಯ್ತಿ ಸಹಾಯಕ ಕಾರ್ಯದರ್ಶಿ ಜಾಫರ್‌ಸಾಬ್ ಸುತಾರ, ಪುರಸಭೆ ಮುಖ್ಯಾಧಿಕಾರಿ ಎಸ್.ಎ. ಕುಮಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.