ADVERTISEMENT

ಭಕ್ತಿ ಭಾವದಿಂದ ನಡೆದ ಕನಕ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 7 ನವೆಂಬರ್ 2017, 6:54 IST
Last Updated 7 ನವೆಂಬರ್ 2017, 6:54 IST
ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ಕನಕ ಜಯಂತಿ ಅಂಗವಾಗಿ ಸೋಮವಾರ ಸಂಜೆ ಕನಕ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಕನಕ ರಥೋತ್ಸವಕ್ಕೆ ಚಾಲನೆ ನೀಡಿದರು
ಬ್ಯಾಡಗಿ ತಾಲ್ಲೂಕಿನ ಕಾಗಿನೆಲೆಯಲ್ಲಿ ಕನಕ ಜಯಂತಿ ಅಂಗವಾಗಿ ಸೋಮವಾರ ಸಂಜೆ ಕನಕ ಗುರು ಪೀಠದ ನಿರಂಜನಾನಂದಪುರಿ ಸ್ವಾಮೀಜಿ ಕನಕ ರಥೋತ್ಸವಕ್ಕೆ ಚಾಲನೆ ನೀಡಿದರು   

ಬ್ಯಾಡಗಿ: ತಾಲ್ಲೂಕಿನ ಕಾಗಿನೆಲೆ ಕನಕ ಗುರು ಪೀಠದ ಆವರಣದಲ್ಲಿ ಸೋಮವಾರ ಕನಕದಾಸರ ಜಯಂತ್ಯುತ್ಸವದ ಅಂಗವಾಗಿ ಕನಕ ರಥೋತ್ಸವ ನಡೆಯಿತು. ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿದರು. ಕನಕ ಗುರುಪೀಠದ ಆಡಳಿತಾಧಿಕಾರಿ ಎಸ್‌.ಎಫ್‌.ಎನ್‌ ಗಾಜಿಗೌಡ್ರ, ಶಾಸಕ ಬಸವರಾಜ ಶಿವಣ್ಣನವರ ಮತ್ತಿತರರು ಇದ್ದರು.

ಕನಕ ಜಯಂತ್ಯುತ್ಸವ : ತಾಲ್ಲೂಕಿನ ಕಾಗಿನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಾಗಿನೆಲೆ ಅಭಿವೃದ್ದಿ ಪ್ರಾಧಿಕಾರದ ಸಹಯೋಗದಲ್ಲಿ ನಡೆದ ಕನಕ ಜಯಂತ್ಯತ್ಸವಕ್ಕೆ ಜಿಲ್ಲಾ ಉತ್ಸುವಾರಿ ಸಚಿವ ರುದ್ರಪ್ಪ ಲಮಾಣಿ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ‘ಸಮಾಜದಲ್ಲಿ ಬೇರೂರಿದ್ದ ಜಾತಿ ಪದ್ಧತಿಯನ್ನು ಹೋಗಲಾಡಿಸಲು ಕನಕರು ನಡೆಸಿದ ಹೋರಾಟ ಸ್ಮರಣೀಯ’ ಎಂದು ಹೇಳಿದರು.
ಕನಕದಾಸರ ಕುರಿತು ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಲಾಯಿತು.

ADVERTISEMENT

ಶಾಸಕ ಬಸವರಾಜ ಶಿವಣ್ಣನವರ ಅಧ್ಯಕ್ಷತೆ ವಹಿಸಿದ್ದರು. ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು, ಮಠದ ಆಡಳಿತಾಧಿಕಾರಿ ಎಸ್‌.ಎಫ್‌.ಎನ್‌ ಗಾಜಿಗೌಡ್ರ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೊಟ್ರೇಶಪ್ಪ ಬಸೆಗಣ್ಣಿ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್‌ಮುನಾಫ್‌ ಎಲಿಗಾರ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಸವಿತಾ ಸುತ್ತಕೊಟಿ, ಉಪಾಧ್ಯಕ್ಷೆ ಶಾಂತವ್ವ ದೇಸಾಯಿ, ಸದಸ್ಯ ಜಗದೀಶ ಪೂಜಾರ, ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಮಲ್ಲೇಶಪ್ಪ ಹೊರಪೇಟೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.