ADVERTISEMENT

ಮತ ಚಲಾಯಿಸಿದ ಪ್ರಮುಖ ಹುರಿಯಾಳುಗಳು

​ಪ್ರಜಾವಾಣಿ ವಾರ್ತೆ
Published 13 ಮೇ 2018, 10:29 IST
Last Updated 13 ಮೇ 2018, 10:29 IST

ಹಾವೇರಿ: ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಶನಿವಾರ ಪ್ರಮುಖರು ಮತದಾನ ಮಾಡಿದ ವಿವರ ಇಲ್ಲಿವೆ.

ಹಾವೇರಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರುದ್ರಪ್ಪ ಲಮಾಣಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ಪರಶುರಾಂ ನಗರದ ಇಜಾರಿಲಕಮಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ಹಾಗೂ ಎಡಿಸಿ ದೇವಗಿರಿ ಉರ್ದು ಶಾಲೆ, ಹೊಸಮಠದ ಬಸವ ಶಾಂತಲಿಂಗ ಸ್ವಾಮೀಜಿ ನಗರದ ಎಸ್‌.ಜೆ.ಎಂ. ಪಿಯು ಕಾಲೇಜು, ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಮತ್ತು ಹರಸೂರು ಬಣ್ಣದಮಠದ ಅಭಿನವ ಚನ್ನಮಲ್ಲಿಕಾರ್ಜುನ ಸ್ವಾಮೀಜಿ ನಗರದ ಹುಕ್ಕೇರಿಮಠದ ಪ್ರೌಢ ಶಾಲೆ, ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಸಲೀಂ ಅಹ್ಮದ್‌ ನಗರದ ಗೆಳೆಯ ಬಳಗದ ಪ್ರಾಥಮಿಕ ಶಾಲೆ, ಜೆಡಿಎಸ್‌ ಅಭ್ಯರ್ಥಿ ಡಾ.ಸಂಜಯ ಡಾಂಗೆ ಅಶ್ವಿನಿ ನಗರದ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.

ರಾಣೆಬೆನ್ನೂರು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಕೆ.ಬಿ.ಕೋಳಿವಾಡ ತಾಲ್ಲೂಕಿನ ಗುಡಗೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ, ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೇಲಗಾರ ನಗರದ ಪೂರ್ವ ಬಡಾವಣೆಯ ಶಾಸಕರ ಮಾದರಿ ಪ್ರಾಥಮಿಕ ಶಾಲೆ, ಕೆಪಿಜೆಪಿ ಅಭ್ಯರ್ಥಿ ಆರ್‌.ಶಂಕರ್ ಬೀರೇಶ್ವರ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಜೆಡಿಎಸ್‌ ಅಭ್ಯರ್ಥಿ ಶ್ರೀಪಾದ ಸಾಹುಕಾರ ಹಾಗೂ ಪಕ್ಷೇತರ ಅಭ್ಯರ್ಥಿ ರುಕ್ಮಿಣಿ ಸಾಹುಕಾರ ತಾಲ್ಲೂಕಿನ ಮೈದೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.

ADVERTISEMENT

ಹಾನಗಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿ.ಎಂ.ಉದಾಸಿ ಮತ್ತು ಸಂಸದ ಶಿವಕುಮಾರ ಉದಾಸಿ ಪಟ್ಟಣದ ಜನತಾ ಬಾಲಿಕೆಯರ ಪ್ರೌಢ ಶಾಲೆ, ಶಾಸಕ ಮನೋಹರ ತಹಸೀಲ್ದಾರ್‌ ಶಾಸಕರ ಮಾದರಿ ಶಾಲೆಯಲ್ಲಿ ಮತ ಚಲಾಯಿಸಿದರು.

ಹಿರೇಕೆರೂರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯು.ಬಿ.ಬಣಕಾರ ತಾಲ್ಲೂಕಿನ ಚಿಕ್ಕೊಣತಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕಾಂಗ್ರೆಸ್‌ ಅಭ್ಯರ್ಥಿ ಬಿ.ಸಿ.ಪಾಟೀಲ ತಾಲ್ಲೂಕಿನ ಬಾಳಂಬೀಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ, ಜೆಡಿಎಸ್‌ ಅಭ್ಯರ್ಥಿ ಸಿದ್ದಪ್ಪ ಗುಡದಪ್ಪನವರ ತಾಲ್ಲೂಕಿನ ಮಾಸೂರು ಗ್ರಾಮ, ಮಾಜಿ ಶಾಸಕ ಬಿ.ಎಚ್‌.ಬನ್ನಿಕೋಡ ತಾಲ್ಲೂಕಿನ ಮಾವಿನತೋಪು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.

ಶಿಗ್ಗಾವಿ ತಾಲ್ಲೂಕಿನ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪಟ್ಟಣದ ಕನ್ನಡ ಪ್ರಾಥಮಿಕ ಶಾಲೆ, ಕಾಂಗ್ರೆಸ್‌ ಅಭ್ಯರ್ಥಿ ಅಜ್ಜಂಪೀರ್‌ ಖಾದ್ರಿ ತಾಲ್ಲೂಕಿನ ಹುಲಗೂರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ, ಜೆಡಿಎಸ್‌ ಅಭ್ಯರ್ಥಿ ಅಶೋಕ ಬೇವಿನಮರದ ಪಟ್ಟಣದ ನಂ.1ಕನ್ನಡ ಪ್ರಾಥಮಿಕ ಶಾಲೆ, ಪಕ್ಷೇತರ ಅಭ್ಯರ್ಥಿ ಸೋಮಣ್ಣ ಬೇವಿನಮರದ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ ಚಲಾಯಿಸಿದರು.

ಬ್ಯಾಡಗಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿರೂಪಾಕ್ಷಪ್ಪ ಬಳ್ಳಾರಿ ತಾಲ್ಲೂಕಿನ ಮೊಟೆಬೆನ್ನೂರು ಗ್ರಾಮ ಪಂಚಾಯ್ತಿ ಕಟ್ಟಡ ಹಾಗೂ ಕಾಂಗ್ರೆಸ್‌ ಅಭ್ಯರ್ಥಿ ಎಸ್‌.ಆರ್‌.ಪಾಟೀಲ ಪಟ್ಟಣದ ಎಸ್‌ಜೆಜೆಎಂ ಸಂಯುಕ್ತ ಪಿಯು ಕಾಲೇಜಿನ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.