ADVERTISEMENT

ಮೂಲಸೌಲಭ್ಯಕ್ಕೆ ಆಗ್ರಹಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2013, 6:46 IST
Last Updated 12 ಡಿಸೆಂಬರ್ 2013, 6:46 IST

ರಾಣೆಬೆನ್ನೂರು: ಅರ್ಹ ಫಲಾನುಭವಿ ಗಳಿಗೆ ಆಶ್ರಯ ಮನೆಗಳನ್ನು ಹಂಚಿಕೆ ಮಾಡಬೇಕು,  ಗ್ರಾಮದಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ತಾಲ್ಲೂಕಿನ ಹುಲ್ಲತ್ತಿ ಗ್ರಾಮಸ್ಥರು ಗುಡ್ಡಗುಡ್ಡಾಪುರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಗ್ರಾಮದ ಮುಖಂಡ ಜಗದೀಶ ಕೆರೂಡಿ ಮಾತನಾಡಿ, ಗ್ರಾಮ ಪಂಚಾಯಿತಿ ಅಧಿಕಾರಿಗಳು ವಾರ್ಡ್‌ ಸಭೆಗಳಲ್ಲಿ ತೆಗೆದುಕೊಂಡ ತೀರ್ಮಾನಗಳನ್ನು ಕೈಬಿಟ್ಟು ತಮಗೆ ತಿಳಿದವರಿಗೆ ಆಶ್ರಯ ಮನೆಗಳನ್ನು ಹಂಚಿಕೆ ಮಾಡುತ್ತ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಪಾದಿಸಿದರು.

ಈ ಗ್ರಾಮದಲ್ಲಿ ಕುಡಿಯುವ ನೀರು, ಚರಂಡಿ, ಬೀದಿ ದೀಪಗಳನ್ನು ದುರಸ್ಥಿಗೊಳಿಸಬೇಕು ಎಂದು ಅನೇಕ ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳನ್ನು ಪ್ರಶ್ನಿಸಿದರೆ ಹಾರಿಕೆ ಉತ್ತರ ನೀಡುತ್ತಿದ್ದಾರೆ, ಕೂಡಲೇ ಗ್ರಾಮದಲ್ಲಿ ಮೂಲಸೌಲಭ್ಯ ಒದಗಿಸಲು ಮುಂದಾಗದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಕೆರೂಡಿ ಎಚ್ಚರಿಕೆ ನೀಡಿದರು.

ಗ್ರಾಮದ ಪರಸಪ್ಪ ಕೂರಗುಂದ, ಮಂಜು ಓಲೇಕಾರ, ಹಾಲೇಶ ಬಸಾಪುರ, ನೀಲವ್ವ ಕಜ್ಜರಿ, ಜಾನಕಮ್ಮ ಕೋನಪ್ಪನವರ, ರೇಣುಕಾ ಪುಟ್ಟಪ್ಪನವರ, ಮೇಘಾ ಓಲೇಕಾರ, ಭರಮಪ್ಪ ಛತ್ರ  ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.