ADVERTISEMENT

ರೈತರಿಂದ ದೆಹಲಿಯಲ್ಲಿ ಅರೆಬೆತ್ತಲೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2017, 8:59 IST
Last Updated 21 ನವೆಂಬರ್ 2017, 8:59 IST
ರಾಷ್ಟ್ರ ರಾಜಧಾನಿ ದೆಹಲಿಯ ಜಂತರ ಮಂತರನಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲೆಯ ರೈತರ ಅನಿರ್ದಿಷ್ಟಾವಧಿ ಅರೆಬೆತ್ತಲೆ ಪ್ರತಿಭಟನೆಯನ್ನು ಭಾನುವಾರ ಪ್ರಾರಂಭವಾಯಿತು
ರಾಷ್ಟ್ರ ರಾಜಧಾನಿ ದೆಹಲಿಯ ಜಂತರ ಮಂತರನಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಜಿಲ್ಲೆಯ ರೈತರ ಅನಿರ್ದಿಷ್ಟಾವಧಿ ಅರೆಬೆತ್ತಲೆ ಪ್ರತಿಭಟನೆಯನ್ನು ಭಾನುವಾರ ಪ್ರಾರಂಭವಾಯಿತು   

ಹಂಸಭಾವಿ: ‘ರಾಷ್ಟ್ರೀಕೃತ ಬ್ಯಾಂಕ್‌ ಗಳಲ್ಲಿನ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು’ ಎಂದು ಒತ್ತಾಯಿಸಿ, ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ನೇತೃತ್ವದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಭಾನುವಾರ ಅನಿರ್ದಿಷ್ಟಾವಧಿ ಅರೆಬೆತ್ತಲೆ ಪ್ರತಿಭಟನೆ ಪ್ರಾರಂಭಿಸಿದ್ದಾರೆ.

ಜಿಲ್ಲೆಯ ರೈತರು ಸತತ ನಾಲ್ಕು ವರ್ಷದ ಬರಗಾಲದ ಬಳಿಕ ಬೆಳೆದ ಬೆಳೆ ಅತಿವೃಷ್ಟಿ, ಅನಾವೃಷ್ಟಿ ಹಾಗೂ ಸೈನಿಕ ಹುಳು ಬಾಧೆಯಿಂದ ಸಂಪೂರ್ಣ ನಾಶವಾಗಿದೆ. ಹೀಗಾಗಿ, ಜಿಲ್ಲೆಯ ರೈತರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ಆದ್ದರಿಂದ, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಒತ್ತಾಯಿಸಲಾಯಿತು.

ಬೆಳೆ ಹಾನಿಯನ್ನು ವೈಜ್ಞಾನಿಕವಾಗಿ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ನೀಡಬೇಕು ಹಾಗೂ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡುವ ವರೆಗೂ ನಮ್ಮ ಪ್ರತಿಭಟನೆಯನ್ನು ವಾಪಸ್‌ ತೆಗೆದುಕೊಳ್ಳುವುದಿಲ್ಲ ಎಂದು ಒತ್ತಾಯಿಸುತ್ತಿದ್ದೇವೆ ಎಂದು ಸಂಚಾಲಕ ಮಾಲತೇಶ ಪೂಜಾರ ತಿಳಿಸಿದರು.

ADVERTISEMENT

ಶಿವಣ್ಣ ಜಾವಣ್ಣನವರ, ಜಗದೀಶ ದಂಡಗೀಹಳ್ಳಿ, ಪರಮೇಶಪ್ಪ ಕಟ್ಟೆಕಾರ, ಮಂಜಪ್ಪ ಮುದಿಯಪ್ಪನವರ, ಸಿದ್ದು ರಾಜೇರ, ಪ್ರಭು ಮತ್ತೀಹಳ್ಳಿ, ಈರಣ್ಣ ಮುದಿಯಣ್ಣನವರ, ಗೀತಾ ಕಟ್ಟೇಕಾರ, ಪ್ರೇಮಾ ಕೆ., ಗೀತಾ ಮುದಿಯಣ್ಣನವರ ಸೇರಿದಂತೆ ಒಟ್ಟು 40 ರೈತರು ಆನಿರ್ದಿಷ್ಟಾವಧಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.