ಹಾವೇರಿ: ಲೋಕಸಭಾ ಚುನಾವಣೆ-ಯ ವೆಚ್ಚ ಹಾಗೂ ಅದಕ್ಕೆ ಸಂಬಂಧಿಸಿದ ವಿಚಾರಗಳ ಜಿಲ್ಲೆಯ ವೀಕ್ಷಕರಾಗಿ ಐಪಿಎಸ್ ಅಧಿಕಾರಿ ವಸಂತ ಗೇಸನ್ ಆಗಮಿಸಿದ್ದಾರೆ.
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಬುಧವಾರ ನಡೆದ ಲೋಕಸಭಾ ಚುನಾವಣೆಯ ವೆಚ್ಚದ ಕುರಿತು ಸಂಬಂಧಿಸಿದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು,ಚುನಾವಣೆ- ವೆಚ್ಚಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ಮೊ:೯೪೮೧೨ ೫೬೧೨೮ನ್ನು ಸಂಪರ್ಕಿಸಬಹುದು ಎಂದು ತಿಳಿಸಿದರು.
ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಂ.ಮಂಜುನಾಥ ನಾಯಕ ಮಾತನಾಡಿ, ಅಧಿಕಾರಿಗಳಿಗೆ ಚುನಾವಣಾ ವೆಚ್ಚದ ಬಗ್ಗೆ ಸಮಸ್ಯೆಗಳಿದ್ದಲ್ಲಿ ಕೂಡಲೇ ವೆಚ್ಚ ವೀಕ್ಷಕರನ್ನು ಸಂಪರ್ಕಿಸಬೇಕೆಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕೆ.ಬಿ.ಆಂಜನಪ್ಪ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಚುನಾವಣಾಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.