ADVERTISEMENT

ವಿಭಾಗ ಮಟ್ಟದ ದಸರಾ ಕ್ರೀಡೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2012, 10:15 IST
Last Updated 9 ಅಕ್ಟೋಬರ್ 2012, 10:15 IST

ಹಾವೇರಿ: 2012-13 ನೇ ಸಾಲಿನ ಬೆಳಗಾವಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಸೋಮವಾರ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.

ಒಲಿಂಪಿಕ್ ಧ್ವಜಾರೋಹಣ ನೆರೆ ವೇರಿಸುವ ಮೂಲಕ ಕ್ರೀಡಾಕೂಟ ಉದ್ಘಾಟಿಸಿದ ಶಾಸಕ ನೆಹರೂ ಓಲೇಕಾರ ಮಾತನಾಡಿ, ಕ್ರೀಡಾಕೂಟಗಳಲ್ಲಿ ನಿರ್ಣಾಯಕರ ಪಾತ್ರ ಬಹಳ ಮಹತ್ವದ್ದಾಗಿದೆ. ನಿಸ್ವಾರ್ಥತೆಯಿಂದ ನಿರ್ಣಯ ನೀಡಿದಲ್ಲಿ ಪ್ರತಿಭಾವಂತ ಕ್ರೀಡಾಪಟುಗಳು ಹೊರಹೊಮ್ಮಲು ಸಾಧ್ಯವೆಂದು ಹೇಳಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದ ಮಕ್ಕಳು ಉತ್ತಮ ಪ್ರದರ್ಶನ ತೋರುವ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ನಿಮ್ಮ ನಿಮ್ಮ ಜಿಲ್ಲೆಗಳಿಗೆ ಕೀರ್ತಿ ತರಬೇಕು. ಕ್ರೀಡಾಕೂಟದಲ್ಲಿ ಸೋಲು-ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯವಾಗಿದೆ ಎಂದರು.

ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವೆ.ಮುತ್ತು ಕಾಮಾಚ್ಚಿ ಮಾತನಾಡಿ, ಇಂದಿನಿಂದ ಎರಡು ದಿನಗಳ ಕಾಲ ನಡೆಯಲಿರುವ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಕಬಡ್ಡಿ, ಕೊಕೋ, ವಾಲಿಬಾಲ್, ಈಜು ಹಾಗೂ ಬಾಸ್ಕೆಟ್‌ಬಾಲ್ ಕ್ರೀಡೆಗಳ ಹಾವೇರಿ ಜಿಲ್ಲೆ ಆತಿಥ್ಯದಲ್ಲಿ ನಡೆಯಲಿದೆ. ಏಳು ಜಿಲ್ಲೆಯ 800ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಜಗದೀಶ ಮಲಗೋಡ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಿರೀಶ ತುಪ್ಪದ, ಜಿಲ್ಲಾ ಕ್ರೀಡಾ ಸಮಿತಿ ಸದಸ್ಯ ಸಲೀಂ ಪಟೇಗಾರ, ಶಿವರಾಜ ಮಾಸೂರ, ರವಿ ಶೆಟ್ಟರ, ವಿಜಯಕುಮಾರ   ಚಿನ್ನಿ ಕಟ್ಟಿ, ಅಥ್ಲೆಟಿಕ್ ಸಂಸ್ಥೆಯ ಕಾರ್ಯ ದರ್ಶಿ ರಮೇಶ ಆನವಟ್ಟಿ ಮುಂತಾದವರು ಹಾಜರಿದ್ದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯಿತ, ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆ, ರಾಜ್ಯ ಕ್ರೀಡಾ ಪ್ರಾಧಿಕಾರ ಹಾಗೂ ವಿವಿಧ ಕ್ರೀಡಾ ಸಂಸ್ಥೆಗಳ ಸಹಯೋಗದಲ್ಲಿ ಈ ಕ್ರೀಡಾಕೂಟ ಆಯೋಜಿಸಲಾಗಿದೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.