ಹಾವೇರಿ: ಚುನಾವಣಾ ಆಯೋಗದ ಅನುಮತಿ ಇಲ್ಲದೇ ವಿಜಯವಾಣಿ ಕನ್ನಡ ದಿನಪತ್ರಿಕೆಯಲ್ಲಿ ತಮ್ಮ ಸಾಧನೆಗಳ ಕುರಿತು ಕಿರು ಹೊತ್ತಿಗೆ ಪ್ರಕಟಿಸಿದ ಸಂಸದ ಶಿವಕುಮಾರ ಉದಾಸಿ ಹಾಗೂ ಪತ್ರಿಕೆ ವಿರುದ್ಧ ಜಿಲ್ಲಾ ಚುನಾವಣಾಧಿಕಾರಿಗಳು ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಿ ನೋಟಿಸ್ ಜಾರಿ ಮಾಡಿದ್ದಾರೆ.
‘ಅಭಿವೃದ್ಧಿ ಹರಿಕಾರ ಶಿವಕುಮಾರ ಉದಾಸಿ ಐದು ವರ್ಷಗಳ ಸಾಧನೆ ನೋಟ’ ಎಂಬ ಕಿರು ಹೊತ್ತಿಗೆಯನ್ನು ಪ್ರಕಟಿಸಿ ಗುರುವಾರ (ಮಾ. 20 ರಂದು) ಪತ್ರಿಕೆ ಜತೆಗೆ ಉಚಿತವಾಗಿ ಮನೆ ಮನೆಗೆ ವಿತರಿಸಲಾಗಿತ್ತು.
ಇದನ್ನು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಿ ನೋಟಿಸ್ ನೀಡಲಾಗಿದೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮಂಜುನಾಥ ನಾಯ್ಕ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.