ADVERTISEMENT

ಸಚಿವ ರವಿಗೆ ಎಬಿವಿಪಿ ಮನವಿ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2012, 9:10 IST
Last Updated 13 ಅಕ್ಟೋಬರ್ 2012, 9:10 IST

ಹಾವೇರಿ:  ರಾಜ್ಯದ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ಮರು ಪಾವತಿ ಯೋಜನೆ ಪರಿಷ್ಕರಣೆ ಆದೇಶ ವನ್ನು ಹಿಂಪಡೆಯುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಘಟಕದ ಕಾರ್ಯಕರ್ತರು ಗುರುವಾರ ಉನ್ನತ ಶಿಕ್ಷಣ ಸಚಿವ ಸಿ.ಟಿ.ರವಿಗೆ ಮನವಿ ಸಲ್ಲಿಸಿದರು.

ಈ ವೇಳೆ ವಿದ್ಯಾರ್ಥಿ ಪರಿಷತ್ತಿನ ಸಂಘಟನಾ ಕಾರ್ಯದರ್ಶಿ ಸಿದ್ದು ಮದರಕಂಡಿ ಮಾತನಾಡಿ, ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಶುಲ್ಕ ವಿನಾ ಯಿತಿ ರದ್ದುಗೊಳಿಸಿ ಪೂರ್ಣ ಪ್ರಮಾ ಣದ ಶುಲ್ಕವನ್ನು ವಿದ್ಯಾರ್ಥಿಗಳೇ ಭರಿಸಬೇಕೆಂಬ ಆದೇಶ ಹೊರಡಿಸಿದ್ದು, ವಿದ್ಯಾರ್ಥಿ ವಿರೋಧಿ ನೀತಿಯಾಗಿದೆ. ರಾಜ್ಯ ಸರ್ಕಾರ ಕೂಡಲೇ ಈ ಆದೇಶ ವನ್ನು ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿದರು.

ರಾಜ್ಯ ಸರ್ಕಾರದ ಆದೇಶದ ಮೇರೆಗೆ ಬಿ.ಸಿ.ಎಂ. ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಮೂಲಕ ಕಾಲೇಜುಗಳಿಗೆ ಹಣ ನೀಡು ತ್ತ್ದ್ದಿದರು. ಆ ಹಣವನ್ನು ಕಾಲೇಜಿನವರು ವಿಶ್ವವಿದ್ಯಾಲಯಗಳಿಗೆ ಪರೀಕ್ಷಾ ಶುಲ್ಕ ವೆಂದು ತುಂಬುತ್ತಿದ್ದರು. ಆದರೆ, ಪ್ರಸಕ್ತ ಸಾಲಿನಲ್ಲಿ ಸರ್ಕಾರ ಸಮಾಜ ಕಲ್ಯಾಣ ಇಲಾಖೆಗೆ ಹಣ ನೀಡುವು ದನ್ನು ನಿಲ್ಲಿಸಿದ್ದರಿಂದ ವಿದ್ಯಾರ್ಥಿಗಳೇ ಪರೀಕ್ಷಾ ಶುಲ್ಕದ ಹಣ ಕಟ್ಟಲು ಹರಸಾಹಸ ಪಡುತ್ತಿದ್ದಾರೆ ಎಂದು ತಿಳಿಸಿದರು.

ಕಳೆದ ವರ್ಷ ವಿದ್ಯಾರ್ಥಿಗಳು 90 ರೂಪಾಯಿ ಅಂಕಪಟ್ಟಿ ಶುಲ್ಕ, 60 ರೂಪಾಯಿ ಅರ್ಜಿ ಶುಲ್ಕ ಸೇರಿ ಒಟ್ಟು 150 ರೂಪಾಯಿ ತುಂಬಬೇಕಿತ್ತು. ಆದರೆ, ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 1,497 ರೂಪಾಯಿ ಶುಲ್ಕ ಪಾವತಿ ಸಬೇಕಾಗಿದ್ದು, ಇಷ್ಟೊಂದು ಹಣ ಭರಿಸುವುದು ಬಡ ವಿದ್ಯಾರ್ಥಿ ಗಳಿಗೆ ಕಷ್ಟವಾಗುತ್ತದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು.

ರಾಜ್ಯ ಈಗಾಗಲೇ ಬರಗಾಲದಿಂದ ತತ್ತರಿಸಿದ್ದು, ದಿನನಿತ್ಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಪರಿಣಾಮಗಳಿಂದ ಜನ ಸಾಮಾನ್ಯರು ತೊಂದರೆ ಅನುಭವಿ ಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬಡ ವಿದ್ಯಾರ್ಥಿಗಳಿಗೆ ಶುಲ್ಕವನ್ನು ಭರಿಸಲು ತೊಂದರೆ ಆಗುತ್ತದೆ. ಹೊಸ ಆದೇಶದಲ್ಲಿ ಬಜೆಟ್ ಲಭ್ಯತೆ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ಹಣವನ್ನು ಮರು ಪಾವತಿಸುವಂತೆ ಮನವಿ ಮಾಡಿ ದರು. ಮನವಿ ಸ್ವೀಕರಿಸಿದ ಸಚಿವ ಸಿ.ಟಿ. ರವಿ ಮಾತನಾಡಿ, ಸಂಭದಪಟ್ಟ ಅಧಿ ಕಾರಿಗಳೊಂದಿಗೆ ಹಾಗೂ ಮುಖ್ಯ ಮಂತ್ರಿಗಳೊಂದಿಗೆ ಚರ್ಚಿಸಿ ಈ ಆದೇಶ ರದ್ದುಗೊಳಿಸಿ ಮೊದಲಿನಂತೆ ಶುಲ್ಕ ತುಂಬಿಸಲು ಸೂಕ್ತ ಕ್ರಮ ಕೈಗೊಳ್ಳುವು ದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ತಿನ ಜಿಲ್ಲಾ ಘಟಕದ ಸಂಚಾಲಕ ಸಂತೋಷ ಆಲದಕಟ್ಟಿ, ಕಾರ್ಯದರ್ಶಿ ಸಾಗರ ಅಂಗಡಿ, ತಾಲ್ಲೂಕು ಘಕಟದ ಸಂಚಾಲಕ ನಾಗರಾಜ ಹುರಳ್ಳಿಕುಪ್ಪಿ , ರಮೇಶ, ಪ್ರಮೋದ ಸೇರಿದಂತೆ ಅನೇಕರು ಹಾಜರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.